ICC Awards: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮಿನೇಟ್ ಆದವರ ಹೆಸರು ಪ್ರಕಟ; ಬುಮ್ರಾಗಿಲ್ಲ ಸ್ಥಾನ!
- T20 Cricketer Of The Year 2024: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನ ಆಗಿರುವ ನಾಲ್ವರು ಆಟಗಾರರ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಭಾರತದ ಒಬ್ಬ ಆಟಗಾರ ಸ್ಥಾನ ಪಡೆದಿದ್ದಾರೆ. ಯಾರಿದ್ದಾರೆ ಈ ಪಟ್ಟಿಯಲ್ಲಿ?
- T20 Cricketer Of The Year 2024: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನ ಆಗಿರುವ ನಾಲ್ವರು ಆಟಗಾರರ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಭಾರತದ ಒಬ್ಬ ಆಟಗಾರ ಸ್ಥಾನ ಪಡೆದಿದ್ದಾರೆ. ಯಾರಿದ್ದಾರೆ ಈ ಪಟ್ಟಿಯಲ್ಲಿ?
(1 / 5)
2024ರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಕಿರುಪಟ್ಟಿಯನ್ನು (ಶಾರ್ಟ್ ಲಿಸ್ಟ್) ಐಸಿಸಿ ಬಿಡುಗಡೆ ಮಾಡಿದೆ. ಈ ಪ್ರಶಸ್ತಿಗೆ ಪೈಪೋಟಿ ನಡೆಸುತ್ತಿರುವ ನಾಲ್ವರು ಆಟಗಾರರಲ್ಲಿ ಭಾರತ ಕ್ರಿಕೆಟ್ ತಂಡದ ಒಬ್ಬ ಆಟಗಾರನೂ ಇರುವುದು ವಿಶೇಷ. ಆದರೆ ಟಿ20 ವಿಶ್ವಕಪ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಈ ಪಟ್ಟಿಯಲ್ಲಿಲ್ಲ ಎಂಬುದು ಅಚ್ಚರಿ ಮೂಡಿಸಿದೆ. ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ಎಂಬುದನ್ನು ಮುಂದೆ ನೋಡೋಣ.
(2 / 5)
ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಟೀಮ್ ಇಂಡಿಯಾದ ಸ್ಟಾರ್ ವೇಗಿ ಅರ್ಷದೀಪ್ ಸಿಂಗ್ ಅವರು 2024ರಲ್ಲಿ 18 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 13.5ರ ಬೌಲಿಂಗ್ ಸರಾಸರಿಯಲ್ಲಿ 36 ವಿಕೆಟ್ ಕಬಳಿಸಿದ್ದಾರೆ. ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ 9 ರನ್ ಗೆ 4 ವಿಕೆಟ್. ಭಾರತ ಟಿ20 ವಿಶ್ವಕಪ್ ಗೆಲುವಿನಲ್ಲಿ ಅರ್ಷದೀಪ್ ಪ್ರಮುಖ ಪಾತ್ರವಹಿಸಿದ್ದರು. ಟೂರ್ನಿಯಲ್ಲಿ 17 ವಿಕೆಟ್ ಉರುಳಿಸಿದ್ದರು.
(3 / 5)
ಜಿಂಬಾಬ್ವೆಯ ಸ್ಟಾರ್ ಆಲ್ರೌಂಡರ್ ಸಿಕಂದರ್ ರಾಜಾ ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. 2024ರಲ್ಲಿ 24 ಟಿ20ಐ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 28.65ರ ಬ್ಯಾಟಿಂಗ್ ಸರಾಸರಿಯಲ್ಲಿ 573 ರನ್ ಕಲೆಹಾಕಿದ್ದಾರೆ. ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ ಅಜೇಯ 133 ರನ್. 22.25ರ ಬೌಲಿಂಗ್ ಸರಾಸರಿಯಲ್ಲಿ 24 ವಿಕೆಟ್ ಉರುಳಿಸಿದ್ದಾರೆ. ಅತ್ಯುತ್ತಮ ಬೌಲಿಂಗ್ ಪ್ರದರ್ಶನ 18 ರನ್‌ಗಳಿಗೆ 5 ವಿಕೆಟ್.
(4 / 5)
ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್ ಅವರು ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗಾಗಿ ಅರ್ಷದೀಪ್ ಮತ್ತು ಸಿಕಂದರ್ ಅವರೊಂದಿಗೆ ಕಣದಲ್ಲಿದ್ದಾರೆ. ಬಾಬರ್ 2024ರಲ್ಲಿ 24 ಟಿ20ಐ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 33.54ರ ಬ್ಯಾಟಿಂಗ್ ಸರಾಸರಿಯಲ್ಲಿ 738 ರನ್ ಗಳಿಸಿದ್ದಾರೆ. ಗರಿಷ್ಠ ವೈಯಕ್ತಿಕ ಇನ್ನಿಂಗ್ಸ್ ಔಟಾಗದೆ 75 ರನ್.
ಇತರ ಗ್ಯಾಲರಿಗಳು