ICC Champions Trophy: 8 ತಂಡಗಳ ನಡುವೆ 2 ಗುಂಪು, ಭಾರತದ ಪಂದ್ಯಗಳ ವೇಳಾಪಟ್ಟಿ, ಯಾವಾಗ, ಎಲ್ಲಿ? ಇಲ್ಲಿದೆ ವಿವರ
- ICC Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಯಾವ ಗುಂಪಿನಲ್ಲಿದೆ? ಯಾವ ತಂಡಗಳೊಂದಿಗೆ ಸೆಣಸಾಟ ನಡೆಸಲಿದೆ? ಭಾರತದ ವೇಳಾಪಟ್ಟಿ, ಗುಂಪುಗಳ ವಿವರ ಇಲ್ಲಿದೆ.
- ICC Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಯಾವ ಗುಂಪಿನಲ್ಲಿದೆ? ಯಾವ ತಂಡಗಳೊಂದಿಗೆ ಸೆಣಸಾಟ ನಡೆಸಲಿದೆ? ಭಾರತದ ವೇಳಾಪಟ್ಟಿ, ಗುಂಪುಗಳ ವಿವರ ಇಲ್ಲಿದೆ.
(1 / 6)
ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಭಾರತದ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಭಾರತ ತಂಡ, ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಹಿನ್ನೆಲೆ ಐಸಿಸಿ ಈ ತೀರ್ಮಾನ ಕೈಗೊಂಡಿದೆ.
(2 / 6)
ಭಾರತದ ಪಂದ್ಯಗಳು ದುಬೈನಲ್ಲಿ ನಡೆದರೆ ಉಳಿದ ಪಂದ್ಯಗಳು ಪಾಕಿಸ್ತಾನದ ಕರಾಚಿ, ಲಾಹೋರ್, ರಾವಲ್ಪಿಂಡಿ ಕ್ರಿಕೆಟ್ ಮೈದಾನಗಳಲ್ಲಿ ಸೆಣಸಾಟ ನಡೆಸಲಿವೆ. ಆದರೆ ಸೆಮಿಫೈನಲ್ಗಳು, ಫೈನಲ್ ಪಂದ್ಯಗಳು ನಡೆಯುವ ಸ್ಥಳಗಳು ಅಂತಿಮಗೊಂಡಿಲ್ಲ.
(3 / 6)
ಭಾರತದ ಮೂರು ಪಂದ್ಯಗಳು ಸಹ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ವಿರುದ್ಧದ ಪಂದ್ಯವೂ ಇಲ್ಲೇ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.
(4 / 6)
ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ತಂಡಗಳು ಟೂರ್ನಿಯ ಒಂದೇ ಗುಂಪಿನಲ್ಲಿವೆ. ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.
(5 / 6)
ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯ ಪ್ರಕಾರ, ಭಾರತವು ಫೆಬ್ರವರಿ 20 ರಂದು ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. . ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ಭಾರತ-ಬಾಂಗ್ಲಾದೇಶ ನಡುವಿನ ಪಂದ್ಯ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಇತರ ಗ್ಯಾಲರಿಗಳು