ಏಕದಿನ ವಿಶ್ವಕಪ್‌ನಲ್ಲಿ ಮೊಹಮ್ಮದ್ ಶಮಿಯನ್ನ ಮೀರಿಸಿದವರಿಲ್ಲ; ಅತಿ ಹೆಚ್ಚು ವಿಕೆಟ್‌ಗಳಲ್ಲಿ ವೇಗಿಯೇ ನಂಬರ್ 1
ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ನಂಬರ್ 1 ಸ್ಥಾನದಲ್ಲಿದ್ದಾರೆ. ಅಗ್ರ 5 ಬೌಲರ್‌ಗಳ ವಿವರ ಇಲ್ಲಿದೆ.
(1 / 6)
2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಪಾಕಿಸ್ತಾನದ ಪ್ರಮುಖ ವೇಗಿ ಶಾಹೀನ್ ಅಫ್ರಿದಿ 5ನೇ ಸ್ಥಾನದಲ್ಲಿದ್ದಾರೆ. ಅಫ್ರಿದಿ 9 ಪಂದ್ಯಗಳಿಂದ 18 ವಿಕೆಟ್ ಪಡೆದಿದ್ದಾರೆ. ಪಾಕಿಸ್ತಾನ ತಂಡ ಗ್ರೂಪ್ ಹಂತದಲ್ಲಿ ವಿಶ್ವಕಪ್‌ನಿಂದ ನಿರ್ಗಮಿಸಿತ್ತು.(REUTERS)
(2 / 6)
ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ 2023ರ ಏಕದಿನ ವಿಶ್ವಕಪ್‌ನಲ್ಲಿ 10 ಪಂದ್ಯಗಳಿಂದ 18 ವಿಕೆಟ್ ಪಡೆದಿದ್ದು, ಅತಿ ಹೆಚ್ಟು ವಿಕೆಟ್ ಪಡೆದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.(PTI)
(3 / 6)
ದಕ್ಷಿಣ ಆಫ್ರಿಕಾದ ಯುವ ವೇಗಿ ಜೆರಾಲ್ಡ್ ಕೊಯೆಟ್ಜಿ ಈ ಬಾರಿಯ ವಿಶ್ವಕಪ್‌ನಲ್ಲಿ 8 ಪಂದ್ಯಗಳಿಂದ 20 ವಿಕೆಟ್ ಗಳಿಸಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ.(REUTERS)
(4 / 6)
ಶ್ರೀಲಂಕಾದ ಯುವ ವೇಗಿ ದಿಲ್ಶನ್ ಮಧುಶಂಕ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಮಧುಶಂಕ ಆಡಿದ 9 ಪಂದ್ಯಗಳಿಂದ 21 ವಿಕೆಟ್ ಉರುಳಿಸಿದ್ದಾರೆ.
(5 / 6)
ಆಸ್ಟ್ರೇಲಿಯಾದ ಸ್ಪಿನ್ನರ್ ಆ್ಯಡಂ ಝಂಪಾ ಈ ಬಾರಿಯ ವಿಶ್ವಕಪ್‌ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು, ಆಸೀಸ್ ಫೈನಲ್ ಪ್ರವೇಶಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಝಂಪಾ ಆಡಿರುವ 10 ಪಂದ್ಯಗಳಿಂದ 5.47 ಎಕಾನಮಿಯಲ್ಲಿ 22 ವಿಕೆಟ್ ಪಡೆದಿದ್ದಾರೆ. ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.(AFP)
(6 / 6)
ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ವಿಶ್ವದಾಖಲೆಯ ಬೌಲಿಂಗ್ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ 57 ರನ್ ನೀಡಿ 7 ವಿಕೆಟ್ ಪಡೆದಿದ್ದರು. 2023ರ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಶಮಿ ನಂಬರ್ 1 ಸ್ಥಾನದಲ್ಲಿದ್ದಾರೆ. ಕೇವಲ 6 ಪಂದ್ಯಗಳಿಂದ 5.01 ಎಕಾನಮಿಯಲ್ಲಿ 23 ವಿಕೆಟ್ ಪಡೆದಿದ್ದಾರೆ.(ICC - X)
ಇತರ ಗ್ಯಾಲರಿಗಳು