Delhi Rains: ದೇಶದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಅಕಾಲಿಕ ವರುಣ ಆರ್ಭಟ
Delhi-NCR Rains: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಅಕಾಲಿಕ ಮಳೆಗೆ ಜನ ತತ್ತರಿಸಿದ್ದಾರೆ.
(1 / 5)
ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು. ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು.(Vipin Kumar/ HT)
(2 / 5)
ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್‌ಸಿಆರ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿಯ ಹಲವೆಡೆ ಶನಿವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.(Ravi Kumar/ HT)
(3 / 5)
ಮಾರ್ಚ್ 21 ರವರೆಗೆ ದೆಹಲಿ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರವೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. (Vipin Kumar/ HT)
(4 / 5)
ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಸ ಪಂಜಾಬ್ ಮತ್ತು ಉತ್ತರಾಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.(Ravi Kumar/ HT)
(5 / 5)
ಮುಂದಿನ ಮೂರು ದಿನಗಳ ಕಾಲ ದೇಶದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.(Vipin Kumar/ HT)
ಇತರ ಗ್ಯಾಲರಿಗಳು