74th Republic Day: ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಡಗರ, ಮಕ್ಕಳ ಕಣ್ಣಲ್ಲಿ ಸಂಭ್ರಮ | ಚಿತ್ರಗಳನ್ನು ನೋಡಿ
- ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವದ ಸಂಭ್ರಮ. ವಿಶೇಷವಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಆಕರ್ಷಕ ಪಥಸಂಚಲನ ನಡೆಯುತ್ತಿದೆ. ವಿವಿಧೆಡೆಯ ಗಣರಾಜ್ಯೋತ್ಸವದ ಸಂಭ್ರಮದ ಚಿತ್ರಗಳು ಇಲ್ಲಿವೆ.
- ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವದ ಸಂಭ್ರಮ. ವಿಶೇಷವಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಆಕರ್ಷಕ ಪಥಸಂಚಲನ ನಡೆಯುತ್ತಿದೆ. ವಿವಿಧೆಡೆಯ ಗಣರಾಜ್ಯೋತ್ಸವದ ಸಂಭ್ರಮದ ಚಿತ್ರಗಳು ಇಲ್ಲಿವೆ.
(1 / 6)
ಭಾರತದಲ್ಲಿ ಇಂದು 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಅಬ್ದುಲ್ಲಾ ಫತ್ಹಾಹ್ ಆಲ್ ಸಿಸಿ ಮುಖ್ಯ ಅತಿಥಿಯಾಗಿದ್ದಾರೆ. (HT Photo/Sanjeev Sharma)
(2 / 6)
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥ (ರಾಜಪಥ)ದಲ್ಲಿ ರಾಷ್ಟ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.(Bloomberg)
(3 / 6)
ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಸಾರುವ ಪಥಸಂಚಲನಕ್ಕೆ ಕರ್ತವ್ಯಪಥ ಸಾಕ್ಷಿಯಾಗುತ್ತಿದೆ. ಭಾರತೀಯ ಸೇನೆ, ನೌಕಾಪಡೆ, ವಾಯುಪಡೆಗಳು ದೇಶದ ಮುಂದೆ ಹಲವು ಸಾಹಸಗಳನ್ನು ಪ್ರದರ್ಶಿಸಲಿವೆ. (Bloomberg)
(4 / 6)
ಈಗ ದೆಹಲಿ ಕರ್ತವ್ಯಪಥದಲ್ಲಿ ಆಕರ್ಷಕ ಪಥಸಂಚಲನ, ಟ್ಯಾಬ್ಲೊ ಶೋ ನಡೆಯುತ್ತಿದ್ದು, ಚುಮುಚುಮು ಚಳಿಯಲ್ಲಿಯೂ ಜನರು ಗಣರಾಜ್ಯೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. (ANI)
(6 / 6)
ಆಗಸ್ಟ್ 15, 1947 ರಲ್ಲಿ ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26, 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನವಾಗಿದೆ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ.(PTI)
ಇತರ ಗ್ಯಾಲರಿಗಳು