ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಗೆದ್ದ ನಿತೇಶ್ ಕುಮಾರ್; ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಬಂಗಾರ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಗೆದ್ದ ನಿತೇಶ್ ಕುಮಾರ್; ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಬಂಗಾರ

ಬ್ಯಾಡ್ಮಿಂಟನ್‌ನಲ್ಲಿ ಚಿನ್ನ ಗೆದ್ದ ನಿತೇಶ್ ಕುಮಾರ್; ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಬಂಗಾರ

  • ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಎರಡನೇ ಚಿನ್ನ ಗೆದ್ದಿದೆ. ಒಟ್ಟಾರೆಯಾಗಿ ಭಾರತಕ್ಕೆ ಒಂಬತ್ತನೇ ಪದಕ ಲಭಿಸಿದೆ. ಇಂದು ಬ್ಯಾಡ್ಮಿಂಟನ್‌ನಲ್ಲಿ ನಿತೇಶ್ ಕುಮಾರ್ ಬಂಗಾರದ ಸಾಧನೆ ಮಾಡಿದ್ದಾರೆ.

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ನಿತೇಶ್ ಕುಮಾರ್ ಚಿನ್ನ ಗೆದ್ದಿದ್ದಾರೆ. ಬ್ಯಾಡ್ಮಿಂಟನ್‌ ಸಿಂಗಲ್ಸ್‌ನಲ್ಲಿ ಈ ಬಾರಿ ಇದು ಭಾರತಕ್ಕೆ ಮೊದಲ ಪದಕ. ಒಟ್ಟಾರೆಯಾಗಿ ಇದು ಎರಡನೇ ಚಿನ್ನದ ಪದಕವಾಗಿದೆ.
icon

(1 / 5)

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ನಿತೇಶ್ ಕುಮಾರ್ ಚಿನ್ನ ಗೆದ್ದಿದ್ದಾರೆ. ಬ್ಯಾಡ್ಮಿಂಟನ್‌ ಸಿಂಗಲ್ಸ್‌ನಲ್ಲಿ ಈ ಬಾರಿ ಇದು ಭಾರತಕ್ಕೆ ಮೊದಲ ಪದಕ. ಒಟ್ಟಾರೆಯಾಗಿ ಇದು ಎರಡನೇ ಚಿನ್ನದ ಪದಕವಾಗಿದೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ ಪುರುಷರ ಬ್ಯಾಡ್ಮಿಂಟನ್‌ ಸಿಂಗಲ್ಸ್ ಎಸ್ಎಲ್3 ಫೈನಲ್‌ನಲ್ಲಿ ನಿತೀಶ್‌ ರೋಚಕ ಗೆಲುವು ಸಾಧಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಗ್ರೇಟ್ ಬ್ರಿಟನ್‌ನ ಡೇನಿಯಲ್ ಬೆತೆಲ್ ವಿರುದ್ಧ 2-1 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಡೇನಿಯಲ್ ಮತ್ತೆ ಬೆಳ್ಳಿಗೆ ತೃಪ್ತಿಪಡಬೇಕು.
icon

(2 / 5)

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ ಪುರುಷರ ಬ್ಯಾಡ್ಮಿಂಟನ್‌ ಸಿಂಗಲ್ಸ್ ಎಸ್ಎಲ್3 ಫೈನಲ್‌ನಲ್ಲಿ ನಿತೀಶ್‌ ರೋಚಕ ಗೆಲುವು ಸಾಧಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಗ್ರೇಟ್ ಬ್ರಿಟನ್‌ನ ಡೇನಿಯಲ್ ಬೆತೆಲ್ ವಿರುದ್ಧ 2-1 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಡೇನಿಯಲ್ ಮತ್ತೆ ಬೆಳ್ಳಿಗೆ ತೃಪ್ತಿಪಡಬೇಕು.(Reuters)

78 ನಿಮಿಷಗಳ ಕಾಲ ನಡೆದ ಸುದೀರ್ಘ ಹೋರಾಟದಲ್ಲಿ ಮೊದಲ ಗೇಮ್ ಅನ್ನು ನಿತೀಶ್ 31ನೇ ನಿಮಿಷದಲ್ಲಿ 21-14ರಿಂದ ಗೆದ್ದುಕೊಂಡರು. ಆದರೆ ಎರಡನೇ ಗೇಮ್ ಅನ್ನು 18-21 ಅಂತರದಿಂದ ಕಳೆದುಕೊಂಡರು. ಮೂರನೇ ಹಾಗೂ ನಿರ್ಣಾಯಕ ಗೇಮ್ ಅನ್ನು 23-21 ಅಂತರದಿಂದ ರೋಚಕವಾಗಿ ಗೆದ್ದುಕೊಂಡರು.
icon

(3 / 5)

78 ನಿಮಿಷಗಳ ಕಾಲ ನಡೆದ ಸುದೀರ್ಘ ಹೋರಾಟದಲ್ಲಿ ಮೊದಲ ಗೇಮ್ ಅನ್ನು ನಿತೀಶ್ 31ನೇ ನಿಮಿಷದಲ್ಲಿ 21-14ರಿಂದ ಗೆದ್ದುಕೊಂಡರು. ಆದರೆ ಎರಡನೇ ಗೇಮ್ ಅನ್ನು 18-21 ಅಂತರದಿಂದ ಕಳೆದುಕೊಂಡರು. ಮೂರನೇ ಹಾಗೂ ನಿರ್ಣಾಯಕ ಗೇಮ್ ಅನ್ನು 23-21 ಅಂತರದಿಂದ ರೋಚಕವಾಗಿ ಗೆದ್ದುಕೊಂಡರು.(Reuters)

ಇದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಎರಡನೇ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಅವನಿ ಲೆಖಾರಾ ಶೂಟಿಂಗ್‌ನಲ್ಲಿ ಚಿನ್ನ ಗೆದ್ದಿದ್ದರು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಒಟ್ಟು ಒಂಬತ್ತು ಪದಕಗಳನ್ನು ಗೆದ್ದಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಬ್ಯಾಡ್ಮಿಂಟನ್‌ನಲ್ಲಿ ಮೂರನೇ ಚಿನ್ನದ ಪದಕ ಗೆದ್ದಿದೆ.
icon

(4 / 5)

ಇದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಎರಡನೇ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಅವನಿ ಲೆಖಾರಾ ಶೂಟಿಂಗ್‌ನಲ್ಲಿ ಚಿನ್ನ ಗೆದ್ದಿದ್ದರು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಒಟ್ಟು ಒಂಬತ್ತು ಪದಕಗಳನ್ನು ಗೆದ್ದಿದೆ. ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಬ್ಯಾಡ್ಮಿಂಟನ್‌ನಲ್ಲಿ ಮೂರನೇ ಚಿನ್ನದ ಪದಕ ಗೆದ್ದಿದೆ.(Reuters)

ಭಾನುವಾರ ನಡೆದ ಸೆಮಿಫೈನಲ್ನಲ್ಲಿ ನಿತೇಶ್ ಜಪಾನ್‌ನ ಡೈಸುಕೆ ಫುಜಿಹರಾ ಅವರನ್ನು ಎದುರಿಸಿದ್ದರು. ಸೆಮಿಫೈನಲ್‌ನಲ್ಲಿ ಜಪಾನ್ ಎದುರಾಳಿಯನ್ನು 21-16, 21-12 ನೇರ ಗೇಮ್‌ಗಳಲ್ಲಿ ಸೋಲಿಸಿದರು.
icon

(5 / 5)

ಭಾನುವಾರ ನಡೆದ ಸೆಮಿಫೈನಲ್ನಲ್ಲಿ ನಿತೇಶ್ ಜಪಾನ್‌ನ ಡೈಸುಕೆ ಫುಜಿಹರಾ ಅವರನ್ನು ಎದುರಿಸಿದ್ದರು. ಸೆಮಿಫೈನಲ್‌ನಲ್ಲಿ ಜಪಾನ್ ಎದುರಾಳಿಯನ್ನು 21-16, 21-12 ನೇರ ಗೇಮ್‌ಗಳಲ್ಲಿ ಸೋಲಿಸಿದರು.(reuters)


ಇತರ ಗ್ಯಾಲರಿಗಳು