ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮ ವಿರಾಜಮಾನ; ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಫೋಟೋಗಳು
- Ayodhya Ram Lalla idol Photos: ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಧಿವತ್ತಾಗಿ ಜರುಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ವಿಗ್ರಹವನ್ನು ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

(1 / 7)
ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಧಿವತ್ತಾಗಿ ಜರುಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ವಿಗ್ರಹವನ್ನು ಲೋಕಾರ್ಪಣೆ ಮಾಡಲಾಯಿತು.
(2 / 7)
ಪ್ರಧಾನಿ ನರೇಂದ್ರ ಮೋದಿ ಅವರು ವಿಧಿ ವಿಧಾನಗಳ ಮೂಲಕ ಇಂದು (ಜನವರಿ 22, ಸೋಮವಾರ) ಮಧ್ಯಾಹ್ನ 12:29:03 ರಿಂದ 12.30:35 ರವರೆಗೆ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಿದರು.
(3 / 7)
ಅಯೋಧ್ಯೆಯಲ್ಲಿ ಬಾಲರಾಮನ ಸುಂದರ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳು ಅಂತಿಮ ಘಟ್ಟಕ್ಕೆ ಮುಟ್ಟಿವೆ. ಕೈಲಿ ಹೂ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಭಕ್ತಿಯಿಂದ ರಾಮನ ಪಾದಕ್ಕೆ ನಮಸ್ಕರಿಸಿದರು. ಪ್ರಾಣ ಪ್ರತಿಷ್ಠಾಪನೆಗಳ ವಿಧಿಗಳನ್ನು ಅತ್ಯಂತ ಭಕ್ತಿಯಿಂದ ನೆರವೇರಿಸಿದರು.
(5 / 7)
ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಪ್ರತಿದಿನ ಒಮ್ಮೆ ನಡೆಯುವ 48 ನಿಮಿಷಗಳ ಅಭಿಜಿತ್ ಮಹೂರ್ತದಲ್ಲಿ ಈ ಪ್ರತಿಷ್ಠಾಪಣೆ ಕಾರ್ಯಕ್ರಮ ನಡೆಯಿತು.
(6 / 7)
500 ವರ್ಷಗಳ ಬಳಿಕ ಕೊನೆಗೂ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ನರೇಂದ್ರ ಮೋದಿ ಮಾತ್ರವಲ್ಲದೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ಕಣ್ತುಂಬಿಕೊಂಡರು.
ಇತರ ಗ್ಯಾಲರಿಗಳು