ಪಶ್ಚಿಮ ಬಂಗಾಳ ರೈಲು ದುರಂತ; ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ, ಸಾವು 15ಕ್ಕೆ ಏರಿಕೆ, 60ಕ್ಕೂ ಹೆಚ್ಚು ಗಾಯಾಳು- Photos
ಪಶ್ಚಿಮ ಬಂಗಾಳದ ನ್ಯೂಜಲ್‌ಪಾಯಿಗುರಿ ಸಮೀಪ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತಕ್ಕೀಡಾಗಿದ್ದು, ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆ ನಡೆದಿದೆ. ಪಶ್ಚಿಮ ಬಂಗಾಳ ರೈಲು ದುರಂತದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ 60ಕ್ಕೂ ಹೆಚ್ಚು ಗಾಯಾಳುಗಳಾಗಿದ್ದಾರೆ. ಇಲ್ಲಿದೆ ಚಿತ್ರನೋಟ.
(1 / 6)
ಪಶ್ಚಿಮ ಬಂಗಾಳದ ನ್ಯೂ ಜಲ್‌ಪಾಯಿಗುರಿ ಸಮೀಪದ ರಂಗಪಾಣಿ ರೈಲ್ವೆ ನಿಲ್ದಾಣದ ಬಳಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಇಂದು (ಜೂನ್ 17) ಬೆಳಗ್ಗೆ ಡಿಕ್ಕಿ ಹೊಡೆದು ಭಾರಿ ದುರಂತ ಸಂಭವಿಸಿದೆ. ಇದರಲ್ಲಿ ಕನಿಷ್ಠ 15 ಜನ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
(PTI)(2 / 6)
ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ರೈಲಿನ ಹಿಂಭಾಗದ ಮೂರು ಬೋಗಿಗಳು ಹಳಿ ತಪ್ಪಿವೆ. ಅಪಘಾತ ನಡೆದ ಕೂಡಲೇ ಸ್ಥಳೀಯರು ಸ್ಥಳಕ್ಕಾಗಮಿಸಿ ಅಲ್ಲಿದ್ದ ಪ್ರಯಾಣಿಕರಿಗೆ ನೆರವು ನೀಡಿದರು.
(PTI)(3 / 6)
ಗೂಡ್ಸ್ ರೈಲು ಡಿಕ್ಕಿ ಹೊಡೆದ ಕಾರಣ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿನ ಒಂದೆರಡು ಬೋಗಿಗಳು ನೆಲಕ್ಕೆ ಉರುಳಿದರೆ, ಒಂದು ಬೋಗಿ ಮೇಲೆದ್ದು ನಿಂತ ದೃಶ್ಯ.
(PTI)(5 / 6)
ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಪಶ್ಚಿಮ ಬಂಗಾಳದ ಸೀಲ್ಡಾಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
(PTI)ಇತರ ಗ್ಯಾಲರಿಗಳು