India Rain: ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ; ದೆಹಲಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಭಾರತದ ಬಹುತೇಕ ರಾಜ್ಯಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಪಂಜಾಬ್ ಹಾಗೂ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಜುಲೈ 29 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ, ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
(1 / 9)
ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉತ್ತರ ಭಾರತ ಹಾಗೂ ದಕ್ಷಿಣ ರಾಜ್ಯಗಳಲ್ಲಿ ಹೆಚ್ಚಿನ ಹಾನಿಯುಂಟಾಗಿದೆ. (PTI)
(2 / 9)
ಇಂದು ಬೆಳಗ್ಗೆ ದೆಲಿಯ-ಎನ್‌ಸಿಆರ್, ನೋಯ್ಡಾ, ಗಾಜಿಯಾಬಾದ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಕೆಲ ಭಾಗಗಳಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವಂತಾಗಿದೆ. (PTI)
(3 / 9)
ದೆಹಲಿ-ಎನ್‌ಸಿಆರ್‌ನಲ್ಲಿ ಜುಲೈ 27ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (File Photo)
(4 / 9)
ಭಾರಿ ಮಳೆಯಿಂದಾಗಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ 12ನೇ ತರಗತಿಯವರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಗೌತಮ್ ಬುದ್ದ ನಗರದ ಜಿಲ್ಲಾಡಳಿತ ತಿಳಿಸಿದೆ. (HT Photo/Sunil Ghosh)
(5 / 9)
ತಗ್ಗು ಪ್ರದೇಶಗಲ್ಲಿ ನೀರು ತುಂಬಿದ್ದ ಪರಿಣಾಮ ಜನ ಮನೆಯಿಂದ ಹೊರಬರಲಾಗದೆ ಪರದಾಡಿದ್ದಾರೆ. ಸಂಕಷ್ಟದಲ್ಲಿದ್ದ ಜನರಿಗೆ ಎನ್‌ಡಿಆರ್‌ಎಫ್ ತಂಡಗಳು ನೀರು, ಆಹಾರವನ್ನು ಪೂರೈಸಿವೆ.(ANI)
(6 / 9)
ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ 944 ಮಿಲಿ ಮೀಟರ್ ಮಳೆಯಾಗಿದೆ. ರಸ್ತೆಗಳ ಜಲಾವೃತಗೊಂಡಿವೆ.(HT Photo/Praful Gangurde)
(8 / 9)
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ-ಕಾಲೇಜುಗಳಿಗೆ ಜುಲೈ 26, 27 ರಂದು ರಜೆ ಘೋಷಿಸಲಾಗಿದೆ. (ANI)
ಇತರ ಗ್ಯಾಲರಿಗಳು