ಇಂಡೋ-ಆಸೀಸ್ 5ನೇ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು? ಲೈವ್ ಸ್ಟ್ರೀಮ್ ವಿವರ ಇಲ್ಲಿದೆ
- India vs Australia 5th Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ.
- India vs Australia 5th Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ.
(1 / 6)
ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಕೊನೆಯ ಹಂತಕ್ಕೆ ತಲುಪಿದೆ. ಪ್ರಸ್ತುತ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ 2-1ರಲ್ಲಿ ಮುನ್ನಡೆ ಸಾಧಿಸಿದ್ದು, ಅಂತಿಮ ಪಂದ್ಯಕ್ಕೆ ಉಭಯ ತಂಡಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಹಾಗಾದರೆ ಯಾವ ಚಾನೆಲ್ಗಳಲ್ಲಿ ಮತ್ತು ಆನ್ಲೈನ್ನಲ್ಲಿ ಈ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ವಿವರ.
(2 / 6)
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5ನೇ ಮತ್ತು ಅಂತಿಮ ಟೆಸ್ಟ್ ಜನವರಿ 3ರಂದು ಪ್ರಾರಂಭವಾಗಲಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಈ ಪಂದ್ಯ ನಡೆಯಲಿದೆ. ಭಾರತ ಕಾಲಮಾನದ ಪ್ರಕಾರ ಟಾಸ್ ಪ್ರಕ್ರಿಯೆ ಬೆಳಿಗ್ಗೆ 4.30ಕ್ಕೆ, ಪಂದ್ಯ 5 ಗಂಟೆಗೆ ಆರಂಭವಾಗಲಿದೆ.
(3 / 6)
ಭಾರತ-ಆಸ್ಟ್ರೇಲಿಯಾ ನಡುವಿನ 5ನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಟ್ಸ್ಟಾರ್ ಭಾರತದಲ್ಲಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದಿದೆ. ಅಂದರೆ, ಸಿಡ್ನಿ ಟೆಸ್ಟ್ ಅನ್ನು ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿ ನೋಡಬಹುದು.
(4 / 6)
ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಒಟ್ಟು 111 ಬಾರಿ ಮುಖಾಮುಖಿಯಾಗಿವೆ. ಭಾರತ 33 ಟೆಸ್ಟ್ ಗೆದ್ದಿದ್ದರೆ, ಆಸ್ಟ್ರೇಲಿಯಾ 47 ಟೆಸ್ಟ್ ಜಯಿಸಿದೆ. ಉಭಯ ತಂಡಗಳ ನಡುವೆ 30 ಟೆಸ್ಟ್ ಪಂದ್ಯಗಳು ಡ್ರಾ ಸಾಧಿಸಿವೆ, ಒಂದು ಟೆಸ್ಟ್ ಪಂದ್ಯ ಸಮಬಲಗೊಂಡಿದೆ.
(5 / 6)
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ಇತರ ಗ್ಯಾಲರಿಗಳು