ಸದ್ದಿಲ್ಲದೆ ಅಶ್ವಿನ್ ಹಿಂದಿಕ್ಕಿದ ವಿರಾಟ್ ಕೊಹ್ಲಿ; ಅತಿ ಹೆಚ್ಚು ಟೆಸ್ಟ್ ಪಂದ್ಯಗಳ ಗೆಲುವಿನ ಭಾಗವಾದ ಭಾರತೀಯ ಆಟಗಾರರು ಯಾರು?
- ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್‌ನಲ್ಲಿ ಭಾರತ ತಂಡ 295 ರನ್‌ಗಳ ಜಯ ಸಾಧಿಸಿದ ಬಳಿಕ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಅವರನ್ನು ಹಿಂದಿಕ್ಕಿದ್ದಾರೆ. ಅತ್ಯಧಿಕ ಟೆಸ್ಟ್ ಪಂದ್ಯಗಳ ಗೆಲುವಿನ ಭಾಗವಾಗವಾಗಿರುವ ಟೀಮ್ ಇಂಡಿಯಾ ಆಟಗಾರರ ಪೈಕಿ ಕೊಹ್ಲಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಟೆಸ್ಟ್ ಗೆಲುವಿನ 5 ದೊಡ್ಡ 'ಭಾರತೀಯ ಅಲೆಕ್ಸಾಂಡರ್'ಗಳು ಯಾರು?

(1 / 5)
ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಭಾರತದ ಆಟಗಾರನಾಗಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು ಈ ಪೈಕಿ 72 ಬಾರಿ ತಂಡದ ಗೆಲುವಿನ ಭಾಗವಾಗಿದ್ದಾರೆ.(X)
(2 / 5)
ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೆ ಏರಿದ್ದಾರೆ. ಇದುವರೆಗೆ 119 ಟೆಸ್ಟ್‌ಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ, ಭಾರತದ 62 ಟೆಸ್ಟ್ ಪಂದ್ಯಗಳ ಗೆಲುವಿನ ಭಾಗವಾಗಿದ್ದಾರೆ. ಪರ್ತ್ ಟೆಸ್ಟ್ ಗೆದ್ದ ನಂತರ ಅಶ್ವಿನ್ರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟರು.(BCCI-X)
(3 / 5)
ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 61 ಟೆಸ್ಟ್ ಪಂದ್ಯಗಲ್ಲಿ ಭಾರತದ ಗೆಲುವಿನ ಭಾಗವಾಗಿದ್ದಾರೆ. ಪ್ರಸ್ತುತ 105 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಆದರೆ ಆಸೀಸ್ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಆಡಿರಲಿಲ್ಲ.(BCCI)
(4 / 5)
ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ 103 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಈ ಪೈಕಿ 58 ಪಂದ್ಯಗಳ ಗೆಲುವಿನಲ್ಲಿ ಭಾರತ ತಂಡದ ಭಾಗವಾಗಿದ್ದಾರೆ. ಒಂದು ವರ್ಷಕ್ಕೂ ಮೇಲ್ಪಟ್ಟು ಅವರು ಭಾರತ ತಂಡದ ಭಾಗವಾಗಿಲ್ಲ.(AP)
ಇತರ ಗ್ಯಾಲರಿಗಳು