ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಭಾರತ Vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ನೇರಪ್ರಸಾರ ವಿವರ; ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ vs ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ನೇರಪ್ರಸಾರ ವಿವರ; ಉಚಿತವಾಗಿ ವೀಕ್ಷಿಸುವುದು ಹೇಗೆ?

  • India vs Pakistan: ಟಿ20 ವಿಶ್ವಕಪ್ 2024ರಲ್ಲಿ ಜೂನ್‌ 9ರಂದು ರೋಚಕ ಪಂದ್ಯ ನಡೆಯುತ್ತಿದೆ. ಭಾರತ ಮತ್ತು ಪಾಕಿಸ್ತಾನಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ವೀಕ್ಷಿಸಬಹುದು? ಉಚಿತವಾಗಿ ವೀಕ್ಷಿಸುವುದು ಹೇಗೆ? ಯಾವ ಚಾನೆಲ್‌ಗಳಲ್ಲಿ ನೇರಪ್ರಸಾರ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

2024ರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಎರಡನೇ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಬಾಬರ್ ಅಜಮ್ ಪಡೆಯ ವಿರುದ್ಧ ರೋಹಿತ್ ಶರ್ಮಾ ಬಳಗವು ಹೈ ವೋಲ್ಟೇಜ್ ಪಂದ್ಯ ಆಡುತ್ತಿದೆ. ಪಂದ್ಯದ ಲೈವ್‌ ಸ್ಟ್ರೀಮಿಂಗ್‌ ವಿವರ ಇಲ್ಲಿದೆ.
icon

(1 / 6)

2024ರ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಎರಡನೇ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಬಾಬರ್ ಅಜಮ್ ಪಡೆಯ ವಿರುದ್ಧ ರೋಹಿತ್ ಶರ್ಮಾ ಬಳಗವು ಹೈ ವೋಲ್ಟೇಜ್ ಪಂದ್ಯ ಆಡುತ್ತಿದೆ. ಪಂದ್ಯದ ಲೈವ್‌ ಸ್ಟ್ರೀಮಿಂಗ್‌ ವಿವರ ಇಲ್ಲಿದೆ.

2024ರ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ಜೂನ್ 9ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ ಸಂಜೆ 7:30ಕ್ಕೆ ನಡೆಯಲಿದೆ.
icon

(2 / 6)

2024ರ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ಜೂನ್ 9ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ ಸಂಜೆ 7:30ಕ್ಕೆ ನಡೆಯಲಿದೆ.(PTI)

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್ ಎ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ 1ನಲ್ಲಿ ಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 2, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್‌ನಲ್ಲಿ ಪಂದ್ಯ ಪ್ರಸಾರವಾಗಲಿದೆ. ಇದಲ್ಲದೆ, ಭಾರತ ತಂಡದ ವಿಶ್ವಕಪ್ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿಯೂ ಉಚಿತವಾಗಿ ನೋಡಬಹುದು.
icon

(3 / 6)

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್ ಎ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ 1ನಲ್ಲಿ ಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 2, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 2, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್‌ನಲ್ಲಿ ಪಂದ್ಯ ಪ್ರಸಾರವಾಗಲಿದೆ. ಇದಲ್ಲದೆ, ಭಾರತ ತಂಡದ ವಿಶ್ವಕಪ್ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿಯೂ ಉಚಿತವಾಗಿ ನೋಡಬಹುದು.(ANI)

ಟಿ20 ವಿಶ್ವಕಪ್ 2024 ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಹೊಂದಿದೆ. ಭಾರತದಲ್ಲಿ ವಿಶ್ವಕಪ್ ಪಂದ್ಯಗಳನ್ನು ಹಾಟ್‌ಸ್ಟಾರ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ವೀಕ್ಷಿಸಬಹುದು. ಭಾರತ-ಪಾಕಿಸ್ತಾನ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮ್‌ ಆಗಲಿದೆ. ಯಾವುದೇ ಚಂದಾದಾರಿಕೆ ಅಗತ್ಯವಿಲ್ಲ.
icon

(4 / 6)

ಟಿ20 ವಿಶ್ವಕಪ್ 2024 ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಹೊಂದಿದೆ. ಭಾರತದಲ್ಲಿ ವಿಶ್ವಕಪ್ ಪಂದ್ಯಗಳನ್ನು ಹಾಟ್‌ಸ್ಟಾರ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ವೀಕ್ಷಿಸಬಹುದು. ಭಾರತ-ಪಾಕಿಸ್ತಾನ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲೈವ್‌ಸ್ಟ್ರೀಮ್‌ ಆಗಲಿದೆ. ಯಾವುದೇ ಚಂದಾದಾರಿಕೆ ಅಗತ್ಯವಿಲ್ಲ.(PTI)

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
icon

(5 / 6)

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.(PTI)

ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಈವರೆಗೆ ಒಟ್ಟು 12 ಬಾರಿ ಮುಖಾಮುಖಿಯಾಗಿವೆ. ಭಾರತ 8 ಪಂದ್ಯಗಳನ್ನು ಗೆದ್ದಿದೆ. ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಟೈನಲ್ಲಿ ಕೊನೆಗೊಂಡಿತ್ತು. ಆದರೆ ಟೀಮ್ ಇಂಡಿಯಾ ಅದನ್ನು ಬೌಲ್ ಔಟ್ ಮೂಲಕ ಗೆದ್ದಿತು. ಟಿ20 ವಿಶ್ವಕಪ್‌ನಲ್ಲಿ ನಡೆದ 7 ಪಂದ್ಯಗಳಲ್ಲಿ ಭಾರತವು ಪಾಕಿಸ್ತಾನವನ್ನು ಒಟ್ಟು ಆರು ಬಾರಿ ಸೋಲಿಸಿದೆ. ಪಾಕಿಸ್ತಾನ 1 ಬಾರಿ ಮಾತ್ರ ಗೆದ್ದಿದೆ.
icon

(6 / 6)

ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಈವರೆಗೆ ಒಟ್ಟು 12 ಬಾರಿ ಮುಖಾಮುಖಿಯಾಗಿವೆ. ಭಾರತ 8 ಪಂದ್ಯಗಳನ್ನು ಗೆದ್ದಿದೆ. ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯವು ಟೈನಲ್ಲಿ ಕೊನೆಗೊಂಡಿತ್ತು. ಆದರೆ ಟೀಮ್ ಇಂಡಿಯಾ ಅದನ್ನು ಬೌಲ್ ಔಟ್ ಮೂಲಕ ಗೆದ್ದಿತು. ಟಿ20 ವಿಶ್ವಕಪ್‌ನಲ್ಲಿ ನಡೆದ 7 ಪಂದ್ಯಗಳಲ್ಲಿ ಭಾರತವು ಪಾಕಿಸ್ತಾನವನ್ನು ಒಟ್ಟು ಆರು ಬಾರಿ ಸೋಲಿಸಿದೆ. ಪಾಕಿಸ್ತಾನ 1 ಬಾರಿ ಮಾತ್ರ ಗೆದ್ದಿದೆ.(ANI)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು