ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಕೆಎಲ್ ರಾಹುಲ್; ಈ ಸಾಧನೆಗೈದ ವಿಶ್ವದ ಮೊದಲ ಆಟಗಾರ
- KL Rahul Record: ಸೌತ್ ಆಫ್ರಿಕಾ ವಿರುದ್ಧ ಶತಕ ಪೂರೈಸಿದ ಕೆಎಲ್ ರಾಹುಲ್, ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ವಿಕೆಟ್ ಕೀಪರ್ ಆಗಿ ಯಾರೂ ಮಾಡಲಾಗದ ಅಪರೂಪದ ಸಾಧನೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
- KL Rahul Record: ಸೌತ್ ಆಫ್ರಿಕಾ ವಿರುದ್ಧ ಶತಕ ಪೂರೈಸಿದ ಕೆಎಲ್ ರಾಹುಲ್, ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ವಿಕೆಟ್ ಕೀಪರ್ ಆಗಿ ಯಾರೂ ಮಾಡಲಾಗದ ಅಪರೂಪದ ಸಾಧನೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
(1 / 9)
ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಿನ್ನಡೆಯಲ್ಲಿದೆ. ಆದರೂ ಕೆಎಲ್ ರಾಹುಲ್ ಭರ್ಜರಿ ಶತಕ ಎಲ್ಲರನ್ನೂ ಆಕರ್ಷಿಸಿದೆ. ಈ ಸೆಂಚುರಿ ಶತಕದೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನೂ ತನ್ನದಾಗಿಸಿಕೊಂಡಿದ್ದಾರೆ.
(2 / 9)
ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ನಡೆಸಿತು. ಕೆಎಲ್ ರಾಹುಲ್ (101) ಶತಕದ ನೆರವಿನಿಂದ ರೋಹಿತ್ ಪಡೆ 245 ರನ್ಗಳಿಗೆ ಸರ್ಪಪತನ ಕಂಡಿತು. ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟ್ ಬೀಸುತ್ತಿರುವ ಆಫ್ರಿಕಾ, ಡೀನ್ ಎಲ್ಗರ್ (140*) ಶತಕದ ಸಹಾಯದಿಂದ 5 ವಿಕೆಟ್ ನಷ್ಟಕ್ಕೆ 256 ರನ್ ಕಲೆ ಹಾಕಿ 11 ರನ್ಗಳ ಮುನ್ನಡೆ ಸಾಧಿಸಿದೆ.
(3 / 9)
ಮೊದಲ ಇನ್ನಿಂಗ್ಸ್ನಲ್ಲಿ ಭಾರತ, ತೀವ್ರ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. 121 ರನ್ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಅದ್ಭುತ ಬ್ಯಾಟಿಂಗ್ ನಡೆಸಿದ ರಾಹುಲ್, ಸೌತ್ ಆಫ್ರಿಕಾ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಮೊದಲ ದಿನದಾಟದಲ್ಲಿ ಅಜೇಯ 70 ರನ್ ಗಳಿಸಿದ್ದ ಕೆಎಲ್, 2ನೇ ದಿನದಲ್ಲಿ 137 ಎಸೆತಗಳಲ್ಲಿ 101 ರನ್ ಸಿಡಿಸಿ ಬರ್ಗರ್ ಬೌಲಿಂಗ್ ಕ್ಲೀನ್ ಬೋಲ್ಡ್ ಆದರು.
(4 / 9)
2ನೇ ದಿನದಾಟವೂ ಬಿರುಸಿನ ಬ್ಯಾಟಿಂಗ್ನೊಂದಿಗೆ ಶತಕ ಪೂರೈಸಿದ ರಾಹುಲ್, ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ದಾಖಲೆಯೊಂದನ್ನು ನಿರ್ಮಿಸಿದರು. ವಿಕೆಟ್ ಕೀಪರ್ ಆಗಿ ಯಾರೂ ಮಾಡಲಾಗದ ಅಪರೂಪದ ಸಾಧನೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ ಎಂಬುದು ವಿಶೇಷ.
(5 / 9)
ಮೂರು ಫಾರ್ಮೆಟ್ನಲ್ಲೂ ವಿಕೆಟ್ ಕೀಪರ್ ಬ್ಯಾಟರ್ ಆಗಿ ಪದಾರ್ಪಣೆ ಮಾಡಿದ ಪಂದ್ಯದಲ್ಲಿ 50+ ಸ್ಕೋರ್ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ಗೆ 2014ರಲ್ಲಿ ಪದಾರ್ಪಣೆ ಮಾಡಿದರೂ, ಇದೇ ಮೊದಲ ಬಾರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ ರಾಹುಲ್. ಧೋನಿ ಬಳಿಕ ರಿಷಭ್ ಪಂತ್, ವೃದ್ಧಿಮಾನ್ ಸಾಹ, ಕೆಎಸ್ ಭರತ್ ವಿಕೆಟ್ ಕೀಪರ್ ಆಗಿದ್ದರು.
(6 / 9)
ಏಕದಿನ ಕ್ರಿಕೆಟ್ನಲ್ಲಿ ವಿಕೆಟ್ ಕೀಪರ್ ಆಗಿ 2020ರಲ್ಲಿ ಮೊದಲ ಬಾರಿಗೆ ಬ್ಯಾಟ್ ಬೀಸಿದ್ದರು. ಆ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ 80 ರನ್ ಚಚ್ಚಿದ್ದರು. ಇನ್ನು ಟಿ20 ಕ್ರಿಕೆಟ್ನಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ 56 ರನ್ ಬಾರಿಸಿದ್ದರು. ಇದೀಗ ಗ್ಲೌಸ್ ತೊಟ್ಟ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಆ ಮೂಲಕ ಮೂರು ಫಾರ್ಮೆಟ್ನಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ 50+ ಸ್ಕೋರ್ ಮಾಡಿದ ಮೊದಲ ಆಟಗಾರ ಎನಿಸಿದ್ದಾರೆ.
(7 / 9)
133 ಎಸೆತಗಳಲ್ಲಿ ಮೂರಂಕಿ ಮೊತ್ತ ತಲುಪಿದ ರಾಹುಲ್, ಸೆಂಚುರಿಯನ್ ಮೈದಾನದಲ್ಲಿ ಒಂದಕ್ಕಿಂತ ಹೆಚ್ಚು ಶತಕ ಸಿಡಿಸಿದ ಮೊದಲನೇ ವಿದೇಶಿ ಬ್ಯಾಟರ್ ಎನಿಸಿಕೊಂಡರು. 2021/22ರ ಪ್ರವಾಸದ ವೇಳೆ ರಾಹುಲ್ ಇದೇ ಮೈದಾನದಲ್ಲಿ 123 ರನ್ ಗಳಿಸಿದ್ದರು.(AFP)
(8 / 9)
ಇದೇ ವೇಳೆ ದಕ್ಷಿಣ ಆಫ್ರಿಕಾದಲ್ಲಿ ಒಂದಕ್ಕಿಂತ ಹೆಚ್ಚು ಶತಕ ಸಿಡಿಸಿದ ಏಷ್ಯಾದ 5ನೇ ಬ್ಯಾಟರ್ ಎಂಬ ದಾಖಲೆ ಬರೆದರು. ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಒಟ್ಟು 5 ಶತಕ ಸಿಡಿಸಿದ್ದಾರೆ. ಉಳಿದಂತೆ ಅಜರ್ ಮಹ್ಮೂದ್, ಟಿ ಸಮರವೀರ, ವಿರಾಟ್ ಕೊಹ್ಲಿ ತಲಾ ಎರಡು ಸೆಂಚುರಿ ಬಾರಿಸಿದ್ದಾರೆ. ಇದೀಗ ರಾಹುಲ್ ಕೂಡಾ ಈ ಪಟ್ಟಿ ಸೇರಿಕೊಂಡಿದ್ದಾರೆ.(AP)
(9 / 9)
ಕೊಯೆಟ್ಜಿ ಎಸೆತಕ್ಕೆ ಸಿಕ್ಸರ್ ಸಿಡಿಸುವ ಮೂಲಕ ಶತಕ ಪೂರೈಸಿದ ರಾಹುಲ್, ಆ ಬಳಿಕ ಯಾವುದೇ ರನ್ ಗಳಿಸಲಿಲ್ಲ. ಅಂತಿಮವಾಗಿ 137 ಎಸೆತ ಎದುರಿಸಿ ಬರ್ಗರ್ ಎಸೆತದಲ್ಲಿ ಕ್ಲೀನ್ ಬೋಲ್ಡ್ ಆದರು. ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡ ರಾಹುಲ್, 8 ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಯಶಸ್ವಿಯಾಗಿದ್ದಾರೆ.(PTI)
ಇತರ ಗ್ಯಾಲರಿಗಳು