Tamil Nadu Rain: ಭಾರಿ ಮಳೆಯಿಂದ ತತ್ತರಿಸಿದ ತಮಿಳುನಾಡು; ಮನೆ, ರಸ್ತೆಗಳು ಜಲಾವೃತ್ತ; ಮುಂದುವರಿದ ರಕ್ಷಣಾ ಕಾರ್ಯ
ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆ ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಜನರನ್ನು ಹೈರಾಣಾಗಿಸಿದೆ. ಮನೆಗಳು, ರಸ್ತೆಗಳು ಜಲಾವೃತಗೊಂಡಿದ್ದು, ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಅದರ ಫೋಟೊಗಳು ಇಲ್ಲಿವೆ.
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
(1 / 8)
ತಮಿಳುನಾಡಿನಲ್ಲಿ ಭಾರಿ ಮಳೆಯಾಗಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾ ತಿರುನಲ್ವೇಲಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.(PTI)
(2 / 8)
ತಮಿಳುನಾಡಿನ ತರುನಲ್ವೇಲಿಯಲ್ಲಿ ಭಾರಿ ಮಳೆಯಿಂದ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದ್ದವರನ್ನು ಎನ್‌ಡಿಆರ್‌ಆಫ್ ತಂಡಗಳು ರಕ್ಷಣೆ ಮಾಡಿವೆ.(PTI)
(3 / 8)
ಎನ್‌ಡಿಆರ್‌ಎಫ್ ಜೊತೆಗೆ ಭಾರತೀಯ ವಾಯು ಸೇನೆಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ವಿತರಿಸುವ ಕಾರ್ಯವನ್ನು ಕೈಗೊಂಡಿತು.(PTI)
(4 / 8)
ತೂತುಕುಡಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನರು ಕಂಗಾಲಾಗಿದ್ದಾರೆ. ವಾಯುಸೇನೆ ನಿರಾಶಿತರಿಗೆ ಪರಿಹಾರ ಸಾಮಗ್ರಿಗಳನ್ನು ಹೆಲಿಕಾಪ್ಟರ್ ಮೂಲಕ ವಿತರಿಸಿದೆ(PTI)
(5 / 8)
ತೂತುಕುಡಿ ನಗರ ಮಳೆಯಿಂದ ನೀರಿನಲ್ಲಿ ಮುಳುಗಿ ಹೋಗಿದೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಹೊರಬಾರದ ಪರಿಸ್ಥಿತಿ ನಿರ್ಮಾಣವಾಗಿತ್ತು.(PTI)
(6 / 8)
ಮಳೆಯಿಂದ ಭಾರಿ ಸಂಕಷ್ಟಕ್ಕೆ ಸಿಲುಕಿದ್ದ ತೂತುಕುಡಿ ಜಿಲ್ಲೆಯಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಎಂಕೆ ಸ್ಟಾಲಿನ್ ಹಾಗೂ ಡಿಎಂಕೆ ಸಂಸದೆ ಕನಿಮೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.(PTI)
(7 / 8)
ತಮಿಳುನಾಡಿನ ತಿರುನಲ್ವೇಲಿ, ಕನ್ಯಾಕುಮಾರಿ, ತೆಂಕಾಸಿ ಹಾಗೂ ತೂತುಕುಡಿಯಲ್ಲಿ ಭಾರಿ ಮಳೆಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಹೈರಾಣವಾಗಿದ್ದಾರೆ. ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆ ತಗ್ಗಿದರೂ ಪ್ರವಾಹ ಪರಿಸ್ಥಿತಿ ಕಡಿಮೆಯಾಗಿಲ್ಲ.(PTI)
ಇತರ ಗ್ಯಾಲರಿಗಳು