8 ವರ್ಷಗಳ ಬಳಿಕ ಭಾರತ ತಂಡಕ್ಕೆ ಮರಳಲು ಸಜ್ಜಾದ ಕರುಣ್ ನಾಯರ್; ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಶಕೆ ಆರಂಭ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  8 ವರ್ಷಗಳ ಬಳಿಕ ಭಾರತ ತಂಡಕ್ಕೆ ಮರಳಲು ಸಜ್ಜಾದ ಕರುಣ್ ನಾಯರ್; ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಶಕೆ ಆರಂಭ

8 ವರ್ಷಗಳ ಬಳಿಕ ಭಾರತ ತಂಡಕ್ಕೆ ಮರಳಲು ಸಜ್ಜಾದ ಕರುಣ್ ನಾಯರ್; ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಶಕೆ ಆರಂಭ

ಇಂಗ್ಲೆಂಡ್‌ನಲ್ಲಿ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಶುಭ್ಮನ್ ಗಿಲ್ ಅವರನ್ನು ಟೆಸ್ಟ್ ತಂಡದ ನೂತನ ನಾಯಕನಾಗಿ ಘೋಷಿಸಲಾಗಿದೆ. ಇದರೊಂದಿಗೆ ಭಾರತ ಕ್ರಿಕೆಟ್‌ನಲ್ಲಿ ಹೊಸ ಶಕೆ ಆರಂಭವಾಗಿದೆ. ಭಾರತದ ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಮಹತ್ವದ ಬದಲಾವಣೆಯಾಗಿದೆ.

ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಥವಾ ರವಿಚಂದ್ರನ್ ಅಶ್ವಿನ್ ಇಲ್ಲದೆ ಆಡಲು ಸಜ್ಜಾಗುತ್ತಿದೆ. ಇವರೆಲ್ಲಾ ಇತ್ತೀಚೆಗಷ್ಟೇ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.
icon

(1 / 11)

ರೋಹಿತ್ ಶರ್ಮಾ ನಿವೃತ್ತಿ ಪಡೆದ ನಂತರ 25 ವರ್ಷದ ಶುಭ್ಮನ್‌ ಗಿಲ್ ಅಧಿಕಾರ ವಹಿಸಿಕೊಂಡಿದ್ದಾರೆ. ಬಹುತೇಕ ಯುವ ಆಟಗಾರರೇ ತುಂಬಿರುವ ತಂಡಕ್ಕೆ ಈ ಬಾರಿ ಕರುಣ್‌ ನಾಯರ್‌ ಅವರನ್ನೂ ಸೇರಿಸಲಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದ ಕನ್ನಡಿಗ ಕರುಣ್ ನಾಯರ್, ಕೊನೆಗೂ ಆಯ್ಕೆದಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
icon

(2 / 11)

(AFP)

ಕರುಣ್‌ ನಾಯರ್ ಬರೋಬ್ಬರಿ 8 ವರ್ಷಗಳ ನಂತರ ಟೀಮ್‌ ಇಂಡಿಯಾಗೆ ಮರಳಲು ಸಜ್ಜಾಗಿದ್ದಾರೆ. 2017ರ ಮಾರ್ಚ್ ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧದ ತವರು ಸರಣಿಯಲ್ಲಿ ಕೊನೆಯ ಬಾರಿಗೆ ಅವರು ಭಾರತ ತಂಡದಲ್ಲಿ ಆಡಿದ್ದರು.
icon

(3 / 11)

(HT_PRINT)

ಈ ಹಿಂದಿನ ಋತುವಿನ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕನ್ನಡಿಗ, ಆ ಬಳಿಕ ಭಾರತ ತಂಡಕ್ಕೆ ಮತ್ತೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿದ್ದರು. ವಿದರ್ಭ ತಂಡ ರಣಜಿ ಟ್ರೋಫಿ ಗೆಲ್ಲುವಲ್ಲಿ ಕರುಣ್‌ ಪಾತ್ರ ನಿರ್ಣಾಯಕವಾಗಿತ್ತು. ನಾಯರ್ ರಣಜಿ ಟ್ರೋಫಿಯಲ್ಲಿ 53ಕ್ಕೂ ಹೆಚ್ಚು ಸರಾಸರಿಯಲ್ಲಿ 863 ರನ್ ಗಳಿಸಿದ್ದಾರೆ.
icon

(4 / 11)

(PTI)

ತಂಡದಲ್ಲಿ ಹೊಸ ಮುಖಗಳಲ್ಲಿ ಎಡಗೈ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಮತ್ತು ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡಾ ಸೇರಿದ್ದಾರೆ. ಅರ್ಷದೀಪ್ ದೀರ್ಘಕಾಲದಿಂದ ಭಾರತದ ವೈಟ್-ಬಾಲ್ ತಂಡಗಳಲ್ಲಿ ಕಾಯಂ ಆಟಗಾರರಾಗಿದ್ದಾರೆ. ಅವರ ಸ್ಥಿರ ಪ್ರದರ್ಶನಗಳಿಂದಾಗಿ ಇದೇ ಮೊದಲ ಬಾರಿಗೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
icon

(5 / 11)

ಅತ್ತ ಸಾಯಿ ಸುದರ್ಶನ್ ಭಾರತೀಯ ದೇಶೀಯ ಕ್ರಿಕೆಟ್‌ ಹಾಗೂ ಐಪಿಎಲ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಟೀಮ್‌ ಇಂಡಿಯಾಗೆ ಆಯ್ಕೆಯಾಗಿದ್ದಾರೆ.
icon

(6 / 11)

(AP file)

ಕಳೆದ ಒಂದು ವರ್ಷದಿಂದ ಟೆಸ್ಟ್ ತಂಡದಲ್ಲಿ ನಿಯಮಿತವಾಗಿ ಕಾಣಿಸಿಕೊಂಡಿದ್ದ ಸರ್ಫರಾಜ್ ಖಾನ್ ಅವರನ್ನು 18 ಸದಸ್ಯರ ತಂಡದಿಂದ ಕೈಬಿಡಲಾಗಿದೆ. ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಅವರು, ಆ ಬಳಿಕ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್‌ನಲ್ಲಿ 150 ರನ್ ಗಳಿಸಿದ್ದರು. ಆದರೆ ನಂತರದ ಎರಡು ಟೆಸ್ಟ್‌ಗಳಲ್ಲಿ 11, 9, 0 ಮತ್ತು 1 ರನ್‌ ಮಾತ್ರ ಗಳಿಸಿ ವಿಫಲರಾದರು. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅವರು ಒಂದು ಪಂದ್ಯವನ್ನೂ ಆಡಲಿಲ್ಲ.
icon

(7 / 11)

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದ ರಿಷಭ್ ಪಂತ್ ಅವರನ್ನು ಸರಣಿಗೆ ಆಯ್ಕೆ ಮಾಡಲಾಗಿದೆ. ಇವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ. 2018/19 ಮತ್ತು 2020/21ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತದ ವಿದೇಶ ಸರಣಿ ಗೆಲುವಿನಲ್ಲಿ ಪಂತ್ ನಿರ್ಣಾಯಕ ಪಾತ್ರ ವಹಿಸಿದ್ದರು. ಅದರಲ್ಲೂ ಗಬ್ಬಾ ಟೆಸ್ಟ್‌ ಅವಿಸ್ಮರಣೀಯ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಇತ್ತೀಚಿನ ಆವೃತ್ತಿಯಲ್ಲಿ  ಕಳಪೆ ಪ್ರದರ್ಶನದ ಹೊರತಾಗಿಯೂ, ಬಿಸಿಸಿಐ ಯುವ ಆಟಗಾರನ ಮೇಲೆ ನಂಬಿಕೆ ಇಟ್ಟಿದೆ.
icon

(8 / 11)

2025ರ ಜೂನ್‌ 20ರಿಂದ ಆಗಸ್ಟ್‌ವರೆಗೆ 5 ಪಂದ್ಯಗಳ ಟೆಸ್ಟ್‌ ಸರಣಿ ಇಂಗ್ಲೆಂಸ್‌ನಲ್ಲಿ ನಡೆಯಲಿದೆ. ಈ ಪ್ರವಾಸದಲ್ಲಿ ಭಾರತವು ಹೆಡಿಂಗ್ಲೆ, ಎಡ್ಜ್‌ಬಾಸ್ಟನ್, ಲಾರ್ಡ್ಸ್, ಓಲ್ಡ್ ಟ್ರಾಫರ್ಡ್ ಮತ್ತು ದಿ ಓವಲ್‌ನಲ್ಲಿ ಪಂದ್ಯಗಳನ್ನು ಆಡಲಿದೆ.
icon

(9 / 11)

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಂತರ ಇದು ಭಾರತದ ಮೊದಲ ದ್ವಿಪಕ್ಷೀಯ ಟೆಸ್ಟ್ ಸರಣಿಯಾಗಿದೆ. ಆಸೀಸ್‌ ವಿರುದ್ಧ ಭಾರತವು 3-1 ಅಂತರದಿಂದ ಸೋಲನ್ನು ಎದುರಿಸಿತ್ತು.
icon

(10 / 11)

ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಭಾರತ ತಂಡ: ಶುಭ್ಮನ್‌ ಗಿಲ್‌ (ನಾಯಕ), ರಿಷಭ್‌ ಪಂತ್‌‌ (ಉಪನಾಯಕ ಮತ್ತು ವಿಕೆಟ್‌ ಕೀಪರ್), ಯಶಸ್ವಿ ಜೈಸ್ವಾಲ್‌, ಕೆಎಲ್‌ ರಾಹುಲ್‌‌, ಸಾಯಿ ಸುದರ್ಶನ್‌, ಅಭಿಮನ್ಯು ಈಶ್ವರನ್, ಕರುಣ್‌ ನಾಯರ್, ನಿತೀಶ್‌ ಕುಮಾರ್‌ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್‌ ಜುರೆಲ್‌ (ವಿಕೆಟ್‌ ಕೀಪರ್), ವಾಷಿಂಗ್ಟನ್‌ ಸುಂದರ್‌, ಶಾರ್ದುಲ್ ಠಾಕೂರ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್ ಕೃಷ್ಣ, ಆಕಾಶ್‌ ದೀಪ್‌, ಅರ್ಷದೀಪ್‌ ಸಿಂಗ್‌, ಕುಲ್ದೀಪ್‌ ಯಾದವ್.
icon

(11 / 11)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು