ರೋಹಿತ್.. ಆಡಿದ್ದು ಸಾಕು.. ದಯವಿಟ್ಟು ರಿಟೈರ್ ಆಗಿ; ಕೆಟ್ಟ ಪ್ರದರ್ಶನಕ್ಕೆ ಹಿಟ್ಮ್ಯಾನ್ ಫುಲ್ ಟ್ರೋಲ್
- Rohit Sharma: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.
- Rohit Sharma: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.
(1 / 6)
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ವಿಫಲರಾಗಿದ್ದಾರೆ. 2ನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಡಕೌಟ್ ಆಗಿದ್ದ ಹಿಟ್ಮ್ಯಾನ್, 2ನೇ ಇನ್ನಿಂಗ್ಸ್ನಲ್ಲೂ 8 ರನ್ಗಳಿಗೆ ನಿರಾಸೆ ಮೂಡಿಸಿದರು. ಇದು ಭಾರತೀಯ ಕ್ರಿಕೆಟ್ ಫ್ಯಾನ್ಸ್ಗೆ ಅಸಮಾಧಾನವುಂಟು ಮಾಡಿದ್ದು, ಭಾರೀ ಟ್ರೋಲ್ ಮಾಡಲಾಗುತ್ತಿದೆ.(AFP)
(2 / 6)
ಟೆಸ್ಟ್ ಕ್ರಿಕೆಟ್ ಕೊನೆಯ 8 ಇನ್ನಿಂಗ್ಸ್ಗಳಲ್ಲಿ ರೋಹಿತ್ ಶರ್ಮಾ 6 ಬಾರಿ ಒಂದಂಕಿಗೆ ಔಟಾಗಿದ್ದಾರೆ. ಫಾರ್ಮ್ ಕಳೆದುಕೊಂಡಿರುವ ಹಿಟ್ಮ್ಯಾನ್, ಶೀಘ್ರವೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.(AP)
(3 / 6)
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.(PTI)
(4 / 6)
ರೋಹಿತ್ ಶರ್ಮಾ ಅವರನ್ನು ಟೆಸ್ಟ್ ಕ್ರಿಕೆಟ್ನಿಂದ ಹೊರಗಿಡಬೇಕು ಮತ್ತು ಯುವ ಆಟಗಾರರಾದ ಋತುರಾಜ್ ಗಾಯಕ್ವಾಡ್, ರಜತ್ ಪಾಟೀದಾರ್ ಮತ್ತು ಅಭಿಮನ್ಯು ಈಶ್ವರನ್ ಅವರಂತಹ ಆಟಗಾರರಿಗೆ ಅವಕಾಶ ನೀಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ.
(5 / 6)
ನ್ಯೂಜಿಲೆಂಡ್ ಸರಣಿಯಲ್ಲಿ ರೋಹಿತ್ ಶರ್ಮಾ ವೈಫಲ್ಯ ಕಳವಳಕ್ಕೆ ಕಾರಣವಾಗಿದ್ದು, ಬಾರ್ಡರ್ ಗವಾಸ್ಕರ್ ಟ್ರೋಫಿಗೂ ಮುನ್ನ ಆತಂಕ ಸೃಷ್ಟಿಸಿದೆ. ಭಾರತದ ಪಿಚ್ಗಳಲ್ಲೇ ರನ್ ಗಳಿಸಲು ಪರದಾಟ ನಡೆಸುತ್ತಿರುವ ಹಿಟ್ಮ್ಯಾನ್, ಆಸೀಸ್ನ ಫಾಸ್ಟ್ ಆ್ಯಂಡ್ ಟ್ರ್ಯಾಕ್ನಲ್ಲಿ ಇದೇ ಪ್ರದರ್ಶನ ಮುಂದುವರೆಸಿದರೆ ಹೇಗೆ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.(AFP)
ಇತರ ಗ್ಯಾಲರಿಗಳು