ಪ್ಯಾರಿಸ್ ಒಲಿಂಪಿಕ್ಸ್: ಬರೋಬ್ಬರಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾ ಹಾಕಿ ತಂಡವನ್ನು ಮಣಿಸಿದ ಭಾರತ
- ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತ ಹಾಕಿ ತಂಡ ಭರ್ಜರಿ ಪ್ರದರ್ಶ ನೀಡುತ್ತಿದೆ. ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 3-2 ಗೋಲುಗಳಿಂದ ಭಾರತವು ಮಣಿಸಿದೆ. ಇದರೊಂದಿಗೆ ಹರ್ಮನ್‌ಪ್ರೀತ್ ಸಿಂಗ್ ತಂಡವು 'ಬಿ' ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿದೆ.
- ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತ ಹಾಕಿ ತಂಡ ಭರ್ಜರಿ ಪ್ರದರ್ಶ ನೀಡುತ್ತಿದೆ. ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 3-2 ಗೋಲುಗಳಿಂದ ಭಾರತವು ಮಣಿಸಿದೆ. ಇದರೊಂದಿಗೆ ಹರ್ಮನ್‌ಪ್ರೀತ್ ಸಿಂಗ್ ತಂಡವು 'ಬಿ' ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿದೆ.
(1 / 6)
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೊದಲ ಕ್ವಾರ್ಟರ್ನಲ್ಲಿ ಭಾರತ ಎರಡು ಗೋಲುಗಳನ್ನು ಗಳಿಸಿತು. 12ನೇ ನಿಮಿಷದಲ್ಲಿ ಅಭಿಷೇಕ್ ಗಳಿಸಿದ ಫೀಲ್ಡ್ ಗೋಲಿನಿಂದ ಭಾರತ 1-0 ಮುನ್ನಡೆ ಸಾಧಿಸಿತು. 13ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಸಿಂಗ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಗಳಿಸಿದರು. ಭಾರತ 2-0 ಮುನ್ನಡೆ ಸಾಧಿಸಿತು.
(2 / 6)
ವಿರಾಮದ ನಂತರ, ಮೂರನೇ ಕ್ವಾರ್ಟರ್‌ನ ಆರಂಭದಲ್ಲಿ ಭಾರತ ಮತ್ತೆ ಅಂತರವನ್ನು ಹೆಚ್ಚಿಸಿತು. 32ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಗೋಲ್ ಬಾರಿಸಿ ಭಾರತಕ್ಕೆ 3-1ರ ಮುನ್ನಡೆ ತಂದುಕೊಟ್ಟರು. ಮೂರನೇ ಕ್ವಾರ್ಟರ್‌ನಲ್ಲಿ, ಆಸ್ಟ್ರೇಲಿಯಾ ಗೋಲು ಗಳಿಸುವ ಪ್ರಯತ್ನ ಮಾಡಿತು. ಆದರೆ ಅಂತರವನ್ನು ಮತ್ತೆ ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.(PTI)
(3 / 6)
ಆಸೀಸ್ ಪರ ಟಾಮ್ ಕ್ರೇಗ್ 26ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದರು. ನಾಲ್ಕನೇ ಕ್ವಾರ್ಟರ್ ನಲ್ಲಿ ಆಸ್ಟ್ರೇಲಿಯಾ ಗೋಲು ಗಳಿಸುವ ಮೂಲಕ ಅಂತರವನ್ನು ಕಡಿಮೆ ಮಾಡಿತು. 55ನೇ ನಿಮಿಷದಲ್ಲಿ ಬ್ಲೇಕ್ ಗೋವರ್ಸ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಗೋಲು ಬಾರಿಸಿ ಅಂಕವನ್ನು 2-3ರತ್ತ ತಂದರು. ಅಂತಿಮವಾಗಿ ಲೀಗ್‌ನ ಕೊನೆಯ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾವನ್ನು 3-2 ರಿಂದ ಸೋಲಿಸಿತು.(PTI)
(4 / 6)
ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳಿಂದ 10 ಅಂಕಗಳೊಂದಿಗೆ ಲೀಗ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 5 ಪಂದ್ಯಗಳಿಂದ 9 ಅಂಕಗಳೊಂದಿಗೆ ಲೀಗ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಬೆಲ್ಜಿಯಂ ಈಗಾಗಲೇ 4 ಪಂದ್ಯಗಳಲ್ಲಿ 12 ಅಂಕಗಳೊಂದಿಗೆ 'ಬಿ' ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.(PTI)
(5 / 6)
ಒಂದು ಹಂತದಲ್ಲಿ ಭಾರತವು 54ನೇ ನಿಮಿಷದಲ್ಲಿ ನಾಲ್ಕನೇ ಗೋಲು ಗಳಿಸುವ ಮೂಲಕ 4-1 ಅಂತರದ ಮುನ್ನಡೆಯಲ್ಲಿತ್ತು. ಆದರೆ ಆ ಗೋಲಿಗೆ ಅಂಕ ಸಿಗಲಿಲ್ಲ. ಆ ಬಳಿಕ ಆಸೀಸ್ ಒಂದು ಗೋಲು ಗಳಿಸುವ ಮೂಲಕ ಸಮಬಲದತ್ತ ಬಂದಿತು. ಆದರೆ, ಭಾರತ ಅವಕಾಶ ನೀಡಲಿಲ್ಲ.(REUTERS)
ಇತರ ಗ್ಯಾಲರಿಗಳು