ನೇಪಾಳ ಭೂಕಂಪದಲ್ಲಿ ಮೃತರ ಸಂಖ್ಯೆ 140ಕ್ಕೆ ಏರಿಕೆ: ಫೋಟೋಸ್​ ನೋಡಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನೇಪಾಳ ಭೂಕಂಪದಲ್ಲಿ ಮೃತರ ಸಂಖ್ಯೆ 140ಕ್ಕೆ ಏರಿಕೆ: ಫೋಟೋಸ್​ ನೋಡಿ

ನೇಪಾಳ ಭೂಕಂಪದಲ್ಲಿ ಮೃತರ ಸಂಖ್ಯೆ 140ಕ್ಕೆ ಏರಿಕೆ: ಫೋಟೋಸ್​ ನೋಡಿ

  • Nepal earthquake: ನೇಪಾಳದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ. 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ದೆಹಲಿ-ಎನ್‌ಸಿಆರ್ ಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ನೇಪಾಳದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 140 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
icon

(1 / 5)

ಭೂಕಂಪದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರೆದಿದೆ.  
icon

(2 / 5)

ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ  6.4 ರಷ್ಟು ದಾಖಲಾಗಿದೆ. ರಾಜಧಾನಿ  ಕಠ್ಮಂಡುವಿನಿಂದ 142 ಕಿ.ಮೀ, ನವದೆಹಲಿಯಿಂದ 941 ಕಿ.ಮೀ ದೂರದಲ್ಲಿರುವ ಜಜ್ರಕೋಟ್‌ನ ಲಮಿದಂಡಾದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. 
icon

(3 / 5)

ಭಾರತದ ದೆಹಲಿ-ಎನ್‌ಸಿಆರ್ ಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. 
icon

(4 / 5)

ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ (ಪ್ರಚಂಡ) ಅವರು ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ನೇಪಾಳದ ಸಾವು-ನೋವಿಗೆ ಸಂತಾಪ ಸೂಚಿಸಿದ್ದಾರೆ. ಅಗತ್ಯ ಸಹಾಯ ನೀಡಲು ಭಾರತ ಸಿದ್ದವಿದೆ ಎಂದು ತಿಳಿಸಿ ಟ್ವೀಟ್​ ಮಾಡಿದ್ದಾರೆ.  
icon

(5 / 5)

ಇತರ ಗ್ಯಾಲರಿಗಳು