ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ; ಬೆಂಗಳೂರು ತಂಡದಲ್ಲಿ ಅಚ್ಚರಿಯ ಬದಲಾವಣೆ
- RR vs RCB: ಐಪಿಎಲ್ 2024ರ ಆವೃತ್ತಿಯ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ.

(1 / 6)
ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.(PTI)
(2 / 6)
ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಬ್ಯಾಟಿಂಗ್ ಲೈನಪ್‌ಗೆ ಸೌರವ್ ಚೌಹಾಣ್ ಆಯ್ಕೆಯಾಗಿದ್ದಾರೆ.(AFP)
(3 / 6)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸೌರವ್ ಚೌಹಾಣ್, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್. (AFP)
(4 / 6)
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ನಾಂದ್ರೆ ಬರ್ಗರ್, ಯುಜ್ವೇಂದ್ರ ಚಾಹಲ್. (PTI)
(5 / 6)
ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಯ್ಕೆಗಳು: ರೋವ್ಮನ್ ಪೊವೆಲ್, ತನುಷ್ ಕೋಟ್ಯಾನ್, ಕುಲದೀಪ್ ಸೇನ್, ಶುಭಂ ದುಬೆ, ಅಬಿದ್ ಮುಷ್ತಾಕ್. (PTI)
ಇತರ ಗ್ಯಾಲರಿಗಳು