ಕನ್ನಡ ಸುದ್ದಿ  /  Photo Gallery  /  Jai Bharat Rally In Kolar On April 16 Sunday, Rahul Gandhi In Karnataka Pcp

Rahul Gandhi's Karnataka Visit: ಕರ್ನಾಟಕಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ಕೋಲಾರದಲ್ಲಿ ಜೈ ಭಾರತ ಸಮಾವೇಶ | ಚಿತ್ರ ಮಾಹಿತಿ

  • Jai Bharat Rally In Kolar: ಕೋಲಾರದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜೈ ಭಾರತ ಸತ್ಯಾಗ್ರಹ ಯಾತ್ರೆ (ಏಪ್ರಿಲ್‌ 16) ನಡೆಯುತ್ತಿದ್ದು, ಸಂಜೆ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಹುಲ್‌ ಗಾಂಧಿ ಭಾಗವಹಿಸಲಿದ್ದಾರೆ. ಕೋಲಾರದ ದೇವರಾಜ ಅರಸು ಕಾಲೇಜು ಎದುರು ಈ ಯಾತ್ರೆಗೆ ಚಾಲನೆ ದೊರಕಿದೆ. 

Jai Bharat Rally In Kolar: ಕೋಲಾರದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜೈ ಭಾರತ ಸತ್ಯಾಗ್ರಹ ಯಾತ್ರೆ (ಏಪ್ರಿಲ್‌ 16) ನಡೆಯುತ್ತಿದ್ದು, ಸಂಜೆ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಹುಲ್‌ ಗಾಂಧಿ ಭಾಗವಹಿಸಲಿದ್ದಾರೆ. ಕೋಲಾರದ ದೇವರಾಜ ಅರಸು ಕಾಲೇಜು ಎದುರು ಈ ಯಾತ್ರೆಗೆ ಚಾಲನೆ ದೊರಕಿದೆ. 
icon

(1 / 9)

ಇಂದು ಬೆಳಗ್ಗೆ 11.50ಕ್ಕೆ ಬೆಂಗಳೂರು ಏರ್​ಪೋರ್ಟ್​​ಗೆ ರಾಹುಲ್ ಗಾಂಧಿ ಆಗಮಿಸಿದ್ದು, ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ತಲುಪಿದ್ದಾರೆ. ಕೋಲಾರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಿ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಕೋಲಾರ ಯಾತ್ರೆಯಲ್ಲಿ  ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯದ ಇತರ ನಾಯಕರು, ಶಾಸಕರು ಮತ್ತಿತರರು ಭಾಗವಹಿಸಿದ್ದಾರೆ. 
icon

(2 / 9)

ರಾಹುಲ್ ಗಾಂಧಿರವರು 2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಕಾರಣ ನೀಡಿ ಚುನಾವಣೆಗೆ ಅನರ್ಹತೆಗೊಂಡಿರುವುದಕ್ಕೆ ಮತ್ತು ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.
icon

(3 / 9)

ರಾಹುಲ್‌ ಗಾಂಧಿಯವರು ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್​ನಲ್ಲಿ ವಿಶ್ರಾಂತಿ ಪಡೆದು ಸಂಜೆ 5.30ಕ್ಕೆ ಬೆಂಗಳೂರಿನ ಜೆ.ಪಿ.ನಗರಕ್ಕೆ ಆಗಮಿಸಲಿದ್ದಾರೆ. ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜೊತೆ ಸಂವಾದ ನಡೆಸಲಿದ್ದಾರೆ. 
icon

(4 / 9)

ರಾಹುಲ್‌ ಗಾಂಧಿಯವರು ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್​ನಲ್ಲಿ ವಿಶ್ರಾಂತಿ ಪಡೆದು ಸಂಜೆ 5.30ಕ್ಕೆ ಬೆಂಗಳೂರಿನ ಜೆ.ಪಿ.ನಗರಕ್ಕೆ ಆಗಮಿಸಲಿದ್ದಾರೆ. ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜೊತೆ ಸಂವಾದ ನಡೆಸಲಿದ್ದಾರೆ. 

ಇಂದು ಸಂಜೆ ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
icon

(5 / 9)

ಇಂದು ಸಂಜೆ ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.(PTI)

"7 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಮತ್ತೆ ಭಾಷಣ ಮಾಡಬೇಕು ಎಂದು ಏಪ್ರಿಲ್ 16 ರಂದು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದ್ದೇವೆ" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.
icon

(6 / 9)

"7 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಮತ್ತೆ ಭಾಷಣ ಮಾಡಬೇಕು ಎಂದು ಏಪ್ರಿಲ್ 16 ರಂದು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದ್ದೇವೆ" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.(PTI)

ಕರ್ನಾಟಕದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ಯಾತ್ರೆ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಯಾತ್ರೆಯಲ್ಲ.
icon

(7 / 9)

ಕರ್ನಾಟಕದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ ಯಾತ್ರೆ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಯಾತ್ರೆಯಲ್ಲ.(PTI)

ದೇಶದ ವಿವಿಧೆಡೆ ಈಗಾಗಲೇ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆದಿದೆ. ಅದರ ಮುಂದುವರೆದ ಭಾಗವಾಗಿ ನಾಳೆ ಕರ್ನಾಟಕದಲ್ಲಿಯೂ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆಯಲಿದೆ. ಜಾರ್ಖಂಡ್‌, ಜೆಮ್ಸೆಡ್‌ಪುರ ಸೇರಿದಂತೆ ವಿವಿಧೆಡೆ ಈ ಯಾತ್ರೆ ನಡೆದಿದೆ. 
icon

(8 / 9)

ದೇಶದ ವಿವಿಧೆಡೆ ಈಗಾಗಲೇ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆದಿದೆ. ಅದರ ಮುಂದುವರೆದ ಭಾಗವಾಗಿ ನಾಳೆ ಕರ್ನಾಟಕದಲ್ಲಿಯೂ ಜೈ ಭಾರತ ಸತ್ಯಾಗ್ರಹ ಯಾತ್ರೆ ನಡೆಯಲಿದೆ. ಜಾರ್ಖಂಡ್‌, ಜೆಮ್ಸೆಡ್‌ಪುರ ಸೇರಿದಂತೆ ವಿವಿಧೆಡೆ ಈ ಯಾತ್ರೆ ನಡೆದಿದೆ. (PTI)

ರಾಹುಲ್ ಗಾಂಧಿಯವರ ಅನರ್ಹತೆ ಕುರಿತು ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆ ಕೆಲವೊಂದು ಕಾನೂನಿನ ತೊಡಕುಗಳು ಇದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮೂರು ಬಾರಿ ಮುಂದೂಡಲಾಗಿತ್ತು.
icon

(9 / 9)

ರಾಹುಲ್ ಗಾಂಧಿಯವರ ಅನರ್ಹತೆ ಕುರಿತು ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆ ಕೆಲವೊಂದು ಕಾನೂನಿನ ತೊಡಕುಗಳು ಇದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮೂರು ಬಾರಿ ಮುಂದೂಡಲಾಗಿತ್ತು.(PTI)

IPL_Entry_Point

ಇತರ ಗ್ಯಾಲರಿಗಳು