ಕನ್ನಡ ಸುದ್ದಿ  /  Photo Gallery  /  Jason Roy Pulls Out Of Ipl 2024 Kkr Name Star England Opener Philip Salt As Replacement Kolkata Knight Riders Prs

ಐಪಿಎಲ್ ಆರಂಭಕ್ಕೂ ಮುನ್ನವೇ ಕೆಕೆಆರ್​​ಗೆ ಆಘಾತ; ಟೂರ್ನಿಯಿಂದ ಹೊರಬಿದ್ದ ಜೇಸನ್ ರಾಯ್, ಬದಲಿಯಾಗಿ ಹಿಟ್ಟರ್​ಗೆ ಅವಕಾಶ

  • Jason Roy Pulls Out of IPL 2024 : ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೂ ಮುನ್ನವೇ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡಕ್ಕೆ ದೊಡ್ಡ ಆಘಾತವಾಗಿದೆ. ಜೇಸನ್ ರಾಯ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಮಾರ್ಚ್ 22ರಿಂದ ಪ್ರಾರಂಭವಾಗಲಿದೆ. ಆದರೆ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ದೊಡ್ಡ ಆಘಾತವಾಗಿದೆ. ಪ್ರಮುಖ ಆಟಗಾರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
icon

(1 / 5)

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಮಾರ್ಚ್ 22ರಿಂದ ಪ್ರಾರಂಭವಾಗಲಿದೆ. ಆದರೆ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಕೋಲ್ಕತಾ ನೈಟ್ ರೈಡರ್ಸ್ ಫ್ರಾಂಚೈಸಿಗೆ ದೊಡ್ಡ ಆಘಾತವಾಗಿದೆ. ಪ್ರಮುಖ ಆಟಗಾರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.(AFP)

ಇಂಗ್ಲೆಂಡ್​ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್ ಅವರು ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2024 ರಿಂದ ಹಿಂದೆ ಸರಿದಿದ್ದಾರೆ. ಕಳೆದ ಮೂರು ಸೀಸನ್​​ಗಳಲ್ಲಿ ಎರಡು ಬಾರಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಜೇಸನ್​ ರಾಯ್.
icon

(2 / 5)

ಇಂಗ್ಲೆಂಡ್​ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್ ಅವರು ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2024 ರಿಂದ ಹಿಂದೆ ಸರಿದಿದ್ದಾರೆ. ಕಳೆದ ಮೂರು ಸೀಸನ್​​ಗಳಲ್ಲಿ ಎರಡು ಬಾರಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಜೇಸನ್​ ರಾಯ್.(AFP)

ಜೇಸನ್ ರಾಯ್ ಬದಲಿಗೆ ಇಂಗ್ಲೆಂಡ್ ತಂಡದ ಮತ್ತೊಬ್ಬ ಹಿಟ್ಟರ್ ಮತ್ತು ವಿಕೆಟ್ ಕೀಪಿಂಗ್ ಬ್ಯಾಟ್ಸ್​ಮನ್​ ಫಿಲಿಪ್ ಸಾಲ್ಟ್ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ.
icon

(3 / 5)

ಜೇಸನ್ ರಾಯ್ ಬದಲಿಗೆ ಇಂಗ್ಲೆಂಡ್ ತಂಡದ ಮತ್ತೊಬ್ಬ ಹಿಟ್ಟರ್ ಮತ್ತು ವಿಕೆಟ್ ಕೀಪಿಂಗ್ ಬ್ಯಾಟ್ಸ್​ಮನ್​ ಫಿಲಿಪ್ ಸಾಲ್ಟ್ ಅವರನ್ನು ಬದಲಿಯಾಗಿ ತಂಡಕ್ಕೆ ಸೇರಿಸಿಕೊಂಡಿದೆ.(AFP)

ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಪರ ಒಂದು ವರ್ಷ ಆಡಿದ್ದ ಫಿಲಿಪ್ ಸಾಲ್ಟ್ 2024ರ ಮಿನಿ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದರು, ಆದರೆ ಈಗ ಅವರು ಜೇಸನ್ ರಾಯ್ ಬದಲಿಗೆ ಕೋಲ್ಕತ್ತಾಗೆ ಬಂದಿದ್ದಾರೆ. ಅವರನ್ನು ಕೆಕೆಆರ್ 1.5 ಕೋಟಿ ರೂ.ಗೆ ಖರೀದಿಸಿದೆ.
icon

(4 / 5)

ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಪರ ಒಂದು ವರ್ಷ ಆಡಿದ್ದ ಫಿಲಿಪ್ ಸಾಲ್ಟ್ 2024ರ ಮಿನಿ ಹರಾಜಿನಲ್ಲಿ ಅನ್​ಸೋಲ್ಡ್ ಆಗಿದ್ದರು, ಆದರೆ ಈಗ ಅವರು ಜೇಸನ್ ರಾಯ್ ಬದಲಿಗೆ ಕೋಲ್ಕತ್ತಾಗೆ ಬಂದಿದ್ದಾರೆ. ಅವರನ್ನು ಕೆಕೆಆರ್ 1.5 ಕೋಟಿ ರೂ.ಗೆ ಖರೀದಿಸಿದೆ.(AFP)

2024ರ ಐಪಿಎಲ್ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಕೋಲ್ಕತಾ ನೈಟ್ ರೈಡರ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 23 ರಂದು ಆಡಲಿದೆ. 
icon

(5 / 5)

2024ರ ಐಪಿಎಲ್ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಕೋಲ್ಕತಾ ನೈಟ್ ರೈಡರ್ಸ್ ತನ್ನ ಮೊದಲ ಪಂದ್ಯವನ್ನು ಮಾರ್ಚ್ 23 ರಂದು ಆಡಲಿದೆ. 


ಇತರ ಗ್ಯಾಲರಿಗಳು