ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಔಟ್, ಮೊಹಮ್ಮದ್ ಶಮಿ ರಿಟರ್ನ್; ಇಂಗ್ಲೆಂಡ್ ಏಕದಿನ ಸರಣಿಗೆ ಭಾರತ ಸಂಭಾವ್ಯ ತಂಡ
- India Squad For ODI Series: ಇಂಗ್ಲೆಂಡ್ ವಿರುದ್ಧದ ಟಿ20ಐ, ಏಕದಿನ ಸರಣಿಗೆ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಜನವರಿ 11 ಅಥವಾ ಜನವರಿ 12ರಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸುವ ಸಾಧ್ಯತೆ ಇದೆ.
- India Squad For ODI Series: ಇಂಗ್ಲೆಂಡ್ ವಿರುದ್ಧದ ಟಿ20ಐ, ಏಕದಿನ ಸರಣಿಗೆ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಜನವರಿ 11 ಅಥವಾ ಜನವರಿ 12ರಂದು ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸುವ ಸಾಧ್ಯತೆ ಇದೆ.
(1 / 10)
ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧದ ಟಿ20-ಏಕದಿನ ಸರಣಿಗೆ ಭಾರತ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಟಿ20ಐ ಸರಣಿಗೆ ತಂಡವನ್ನು ಬಹುತೇಕ ಅಂತಿಮಗೊಳಿಸಿದ ಬಿಸಿಸಿಐ, ಫೆಬ್ರವರಿ 6 ರಿಂದ ಶುರುವಾಗುವ ಏಕದಿನ ಸರಣಿಗೆ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಜನವರಿ 11 ಅಥವಾ 12ರಂದು ತಂಡ ಪ್ರಕಟವಾಗುವ ಸಾಧ್ಯತೆ ಇದೆ.
(2 / 10)
ಏಕದಿನ ಸರಣಿಗೆ ಪ್ರಕಟವಾಗುವ ತಂಡವೇ ಬಹುತೇಕ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಇರಲಿದೆ. ಆದರೆ ಕೆಲವರಿಗೆ ವಿಶ್ರಾಂತಿ ನೀಡಬಹುದು ಎಂದು ಹೇಳಲಾಗುತ್ತಿದೆ. ಅದರಂತೆ ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಈ ಸರಣಿಗೆ ಅಲಭ್ಯರಾಗಬಹುದು. ಆದರೆ ಮೊಹಮ್ಮದ್ ಶಮಿ ಮರಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
(3 / 10)
ಸಿಡ್ನಿಯಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಟೆಸ್ಟ್‌ನಲ್ಲಿ 5ನೇ ಟೆಸ್ಟ್‌ನಲ್ಲಿ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ತುತ್ತಾದರು. ಅವರ ಗಾಯದ ತೀವ್ರತೆಯ ಬಗ್ಗೆ ತಿಳಿದು ಬಂದಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಇನ್ನೂ ಸಮಯ ಇರುವ ಕಾರಣ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ವರದಿಯಾಗಿದೆ.
(HT_PRINT)(4 / 10)
ಮತ್ತೊಂದೆಡೆ, ದಿ ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಕೆಎಲ್ ರಾಹುಲ್ ವಿಶ್ರಾಂತಿ ಪಡೆಯಲು ಬಯಸಿದ್ದಾರಂತೆ. ಅವರೇ ವಿಶ್ರಾಂತಿ ಬೇಕೆಂದು ಬಿಸಿಸಿಐಗೆ ಕೋರಿದ್ದಾರೆ ಎಂದು ವರದಿಯಾಗಿದೆ. ಅವರು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗುವ ಕಾರಣ ರಾಹುಲ್ಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿದೆ.
(5 / 10)
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ. ಅವರು ಶುಭ್ಮನ್ ಗಿಲ್ ಅವರೊಂದಿಗೆ ಬ್ಯಾಟಿಂಗ್ ಆರಂಭಿಸಲಿದ್ದಾರೆ. ಯಶಸ್ವಿ ಜೈಸ್ವಾಲ್ ಬ್ಯಾಕಪ್ ಓಪನರ್ ಆಗಿ ಅವಕಾಶ ಪಡೆಯುವ ಸಾಧ್ಯತೆ ಇದೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಖಚಿತ.
(6 / 10)
ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಲಿದ್ದಾರೆ. ಅವರು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ವಿಕೆಟ್ ಕೀಪರ್-ಬ್ಯಾಟರ್ ಆಗಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
(7 / 10)
ಹಾರ್ದಿಕ್ ಪಾಂಡ್ಯ 2023ರ ಏಕದಿನ ವಿಶ್ವಕಪ್ ನಂತರ ಮೊದಲ ಬಾರಿಗೆ ಏಕದಿನ ಸ್ವರೂಪಕ್ಕೆ ಮರಳಲಿದ್ದಾರೆ. ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ತಂಡದಲ್ಲಿ ಇಬ್ಬರು ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಆಗಿದ್ದು, ರವೀಂದ್ರ ಜಡೇಜಾ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ.
(8 / 10)
ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ದಾಳಿಯನ್ನು ಮುನ್ನಡೆಸಲು ಮೊಹಮ್ಮದ್ ಶಮಿ ತಂಡಕ್ಕೆ ಮರಳಲಿದ್ದಾರೆ. ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಅವರು ಶಮಿಗೆ ಸಾಥ್ ಕೊಡಲಿದ್ದಾರೆ. ಕುಲ್ದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕಣಕ್ಕಿಳಿಯಬಹುದು. ಆದರೆ ಬುಮ್ರಾ ಮತ್ತು ಕೆಎಲ್ ರಾಹುಲ್ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮರಳುವುದು ಖಚಿತ ಎಂದು ವರದಿಯಾಗಿದೆ.
(9 / 10)
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ಆಡುವ XI ಸಾಧ್ಯತೆ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ಬ್ಯಾಕಪ್ ವಿಕೆಟ್ ಕೀಪರ್ ಸಾಧ್ಯತೆ) ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಇತರ ಗ್ಯಾಲರಿಗಳು