ಅದೇ ಬೆನ್ನು ಗಾಯದಿಂದ 2ನೇ ಬಾರಿಗೆ ಐಸಿಸಿ ಟೂರ್ನಿ ಕಳೆದುಕೊಂಡ ಜಸ್ಪ್ರೀತ್ ಬುಮ್ರಾ!
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅದೇ ಬೆನ್ನು ಗಾಯದಿಂದ 2ನೇ ಬಾರಿಗೆ ಐಸಿಸಿ ಟೂರ್ನಿ ಕಳೆದುಕೊಂಡ ಜಸ್ಪ್ರೀತ್ ಬುಮ್ರಾ!

ಅದೇ ಬೆನ್ನು ಗಾಯದಿಂದ 2ನೇ ಬಾರಿಗೆ ಐಸಿಸಿ ಟೂರ್ನಿ ಕಳೆದುಕೊಂಡ ಜಸ್ಪ್ರೀತ್ ಬುಮ್ರಾ!

  • Jasprit Bumrah: ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿರುವ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೊಮ್ಮೆ ಐಸಿಸಿ ಪಂದ್ಯಾವಳಿಯನ್ನು ಕಳೆದುಕೊಂಡಿದ್ದಾರೆ. ಅದಕ್ಕೆ ಇದೇ ಬೆನ್ನಿನ ಗಾಯ.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೆ ಪರಿಷ್ಕೃತ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಸಿಸಿ ಗಡುವಿನೊಳಗೆ ಪ್ರಕಟಿಸಿದ ಅಂತಿಮ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ.
icon

(1 / 9)

(AFP)

ಬೆನ್ನು ನೋವಿನಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಜಸ್ಪ್ರೀತ್ ಬುಮ್ರಾ ಮಹತ್ವದ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ವೇಗಿ ಹರ್ಷಿತ್ ರಾಣಾ ಅವರಿಗೆ ಅವಕಾಶ ಕಲ್ಪಿಸಲಾಗಿದೆ.
icon

(2 / 9)

(HT_PRINT)

ಹಾಗೆಯೇ ತಾತ್ಕಾಲಿಕ ತಂಡದ ಭಾಗವಾಗಿದ್ದ ಎಡಗೈ ಆಟಗಾರ ಯಶಸ್ವಿ ಜೈಸ್ವಾಲ್ ಬದಲಿಗೆ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ 15 ಸದಸ್ಯರ ತಂಡದಲ್ಲಿ ಅವಕಾಶ ನೀಡಲಾಗಿದೆ.
icon

(3 / 9)

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಲಾದ ಸ್ಕ್ಯಾನ್‌ನಲ್ಲಿ ಬುಮ್ರಾ ಬೆನ್ನಿನಲ್ಲಿ ಯಾವುದೇ ಗಂಭೀರ ಸಮಸ್ಯೆ ಕಂಡುಬಂದಿಲ್ಲ. ಆದರೆ ಮ್ಯಾಚ್ ಫಿಟ್ ಆಗಿಲ್ಲ ಎನ್ನಲಾಗಿದೆ.
icon

(4 / 9)

ಬಿಜಿಟಿ ಸರಣಿಯ ಕೊನೆಯ ಪಂದ್ಯದಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದ ಬುಮ್ರಾಗೆ 5 ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಹಾಗಾಗಿ ಚಾಂಪಿಯನ್ಸ್ ಟ್ರೋಫಿಗೆ ಮರಳುವ ನಿರೀಕ್ಷೆ ಇತ್ತು. ಆದರೀಗ ನಿರೀಕ್ಷೆ ಹುಸಿಯಾಗಿದೆ.
icon

(5 / 9)

ಬುಮ್ರಾಗೆ ಬೆನ್ನಿನ ಸಮಸ್ಯೆ ಹಿಂದಿನಿಂದಲೂ ಇದೆ. ಇದೇ ಗಾಯದ ಕಾರಣದಿಂದಲೇ ವೇಗಿ ಮತ್ತೊಮ್ಮೆ ಐಸಿಸಿ ಟೂರ್ನಮೆಂಟ್‌ ಕಳೆದುಕೊಂಡಿದ್ದಾರೆ. ಹಲವು ಸರಣಿಗಳನ್ನೂ ತಪ್ಪಿಸಿಕೊಂಡಿದ್ದರು.
icon

(6 / 9)

ಇದೇ ಬೆನ್ನಿನ ಗಾಯದಿಂದಾಗಿ ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ ಟೂರ್ನಿಯನ್ನು ಕಳೆದುಕೊಂಡಿದ್ದರು. ಅಂದು ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆ ಟೂರ್ನಿಯಲ್ಲಿ ಭಾರತ ಸೆಮಿಫೈನಲ್​ನಲ್ಲಿ ಸೋತಿತ್ತು.
icon

(7 / 9)

(REUTERS)

ಪ್ರಸ್ತುತ ಬುಮ್ರಾ ಯಾವಾಗ ಮೈದಾನಕ್ಕೆ ಮರಳುತ್ತಾರೆ? ಎನ್ನುವುದು ಸಮಯ ನಿಗದಿಯಾಗಿಲ್ಲ. ಆದರೆ ಐಪಿಎಲ್​ ಆರಂಭದೊಳಗೆ ಫಿಟ್ ಆಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.
icon

(8 / 9)

ಭಾರತದ ಪರಿಷ್ಕೃತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
icon

(9 / 9)

ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು