ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್; ದಿಗ್ಗಜ ಬ್ರಿಯಾನ್ ಲಾರಾ ದಾಖಲೆ ಮುರಿದ ಜೋ ರೂಟ್
- Joe Root Record: ಇಂಗ್ಲೆಂಡ್ ಬ್ಯಾಟ್ಸ್ಮನ್ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ ಅವರನ್ನು ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ.
- Joe Root Record: ಇಂಗ್ಲೆಂಡ್ ಬ್ಯಾಟ್ಸ್ಮನ್ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ. ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ ಅವರನ್ನು ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ.
(1 / 6)
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೋ ರೂಟ್ ಮತ್ತೊಂದು ಅಪರೂಪದ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಈ ಸಾಧನೆ ಮಾಡಿದ 7ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಇದೇ ವೇಳೆ ಬ್ರಿಯಾನ್ ಲಾರಾ ದಾಖಲೆಯನ್ನೂ ಹಿಂದಿಕ್ಕಿದ್ದಾರೆ.
(2 / 6)
ದ್ವಿತೀಯ ಟೆಸ್ಟ್ನ ಮೊದಲ ದಿನದ ಭೋಜನ ವಿರಾಮದ ನಂತರ ಜೋ ರೂಟ್ 60 ರನ್ ಗಳಿಸಿದ್ದ ಅವಧಿಯಲ್ಲಿ 12 ಸಾವಿರ ಟೆಸ್ಟ್ ರನ್ಗಳ ಮೈಲಿಗಲ್ಲನ್ನು ತಲುಪಿದರು. ರೂಟ್ 143ನೇ ಟೆಸ್ಟ್ನ 261ನೇ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದಾರೆ.
(3 / 6)
ಸಚಿನ್ ತೆಂಡೂಲ್ಕರ್ (15921), ರಿಕಿ ಪಾಂಟಿಂಗ್ (13378), ಜಾಕ್ ಕಾಲಿಸ್ (13289), ರಾಹುಲ್ ದ್ರಾವಿಡ್ (13288), ಅಲೆಸ್ಟರ್ ಕುಕ್ (12472) ಮತ್ತು ಕುಮಾರ ಸಂಗಕ್ಕಾರ (12400) ನಂತರ ಟೆಸ್ಟ್ ಕ್ರಿಕೆಟ್ನಲ್ಲಿ 12 ಸಾವಿರ ರನ್ಗಳ ಮೈಲಿಗಲ್ಲನ್ನು ತಲುಪಿದ 7ನೇ ಆಟಗಾರ ಎನಿಸಿದ್ದಾರೆ.
(4 / 6)
12 ಸಾವಿರ ರನ್ಗಳ ಗಡಿ ದಾಟುವುದರೊಂದಿಗೆ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿದ್ದಾರೆ. ಲಾರಾ 131 ಟೆಸ್ಟ್ ಪಂದ್ಯಗಳಲ್ಲಿ 11953 ರನ್ ಗಳಿಸಿದ್ದಾರೆ. ಈ ಟೆಸ್ಟ್ಗೂ ಮೊದಲು ಲಾರಾಗಿಂತ 14 ರನ್ ಹಿಂದೆ ಇದ್ದ ರೂಟ್ ಈಗ ಅವರನ್ನು ಹಿಂದಕ್ಕೆ ತಳ್ಳಿದ್ದಾರೆ.
(5 / 6)
ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅಲೆಸ್ಟರ್ ಕುಕ್ ನಂತರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಜೋ ರೂಟ್ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ. 12472 ರನ್ ಗಳಿಸಿರುವ ಅಲೆಸ್ಟರ್ ಕುಕ್ ಅವರನ್ನು ರೂಟ್ ಶೀಘ್ರದಲ್ಲೇ ಹಿಂದಿಕ್ಕುವ ಸಾಧ್ಯತೆ ಇದೆ.
(6 / 6)
ದ್ವಿತೀಯ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ರೂಟ್ 124 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 87 ರನ್ ಗಳಿಸಿ ಶತಕ ವಂಚಿತರಾದರು. ಆದರೂ ವಿಶೇಷ ದಾಖಲೆ ನಿರ್ಮಿಸಿದರು. ಜೋ ರೂಟ್ ಸಕ್ರಿಯ ಕ್ರಿಕೆಟಿಗರಿಗಿಂತ ಬಹಳ ಮುಂದಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 9685 ರನ್ , ವಿರಾಟ್ ಕೊಹ್ಲಿ 113 ಟೆಸ್ಟ್ ಪಂದ್ಯಗಳಲ್ಲಿ 8848 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ.
ಇತರ ಗ್ಯಾಲರಿಗಳು