ಕಲ್ಯಾಣ ಕರ್ನಾಟಕ ಉತ್ಸವ; ಅಮೆರಿಕಾದಿಂದ ಬಂದ ಡಿಕೆಶಿ ಭಾಗಿ, ಹೇಗಿತ್ತು ಸಡಗರದ ಕ್ಷಣಗಳು
- ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವದ ಕಾರ್ಯಕ್ರಮಗಳು ಜರುಗಿದವು. ಪಥಸಂಚಲನ, ಗೌರವ ವಂದನೆ, ಮೆರವಣಿಗೆ, ಅಭಿವೃದ್ದಿ ಕಾರ್ಯಕ್ರಮಕ್ಕೆ ಚಾಲನೆಗಳೊಂದಿಗೆ ಉತ್ಸವ ನಡೆಯಿತು.
- ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವದ ಕಾರ್ಯಕ್ರಮಗಳು ಜರುಗಿದವು. ಪಥಸಂಚಲನ, ಗೌರವ ವಂದನೆ, ಮೆರವಣಿಗೆ, ಅಭಿವೃದ್ದಿ ಕಾರ್ಯಕ್ರಮಕ್ಕೆ ಚಾಲನೆಗಳೊಂದಿಗೆ ಉತ್ಸವ ನಡೆಯಿತು.
(1 / 7)
ಅಮೆರಿಕಾ ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು ಹೀಗೆ.
(2 / 7)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಭಾಗವಾಗಿ ಕಲಬುರಗಿಯಲ್ಲಿ ಸರ್ದಾರ್ ವಲ್ಲಭಾ ಬಾಯ್ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
(3 / 7)
ಕಲಬುರಗಿಯ ವಲ್ಲಭಾಬಾಯ್ ಚೌಕದಲ್ಲಿ ಸಚಿವ ಸಂಪುಟದ ಸದಸ್ಯರೊಂದಿಗೆ ಮಾಲಾರ್ಪಣೆ ಮಾಡಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದರು.
(4 / 7)
ಕಲಬುರಗಿಯ ಜಿಲ್ಲಾ ಕೇಂದ್ರದಲ್ಲಿ ಆಯೋಜನೆಗೊಂಡಿದ್ದ ಕಲ್ಯಾಣ ಕರ್ನಾಟಕದ ಉತ್ಸವದ ಮೆರವಣಿಗೆಯಲ್ಲಿ ಸಾಧನೆಯ ಸ್ಥಬ್ಧಚಿತ್ರಗಳು ಗಮನ ಸೆಳೆದವು.
(5 / 7)
ಕಲಬುರಗಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಗೌರವ ವಂದನೆ ಸ್ವೀಕರಿಸಿದರು.
(6 / 7)
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಡೆದ ಪರೇಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿವಿಧ ತಂಡಗಳ ಗೌರವ ವಂದನೆಯನ್ನು ಸ್ವೀಕರಿಸಿದರು.
ಇತರ ಗ್ಯಾಲರಿಗಳು