ಚಂದನವನಕ್ಕೆ ಬರ್ತಿದ್ದಾರೆ ‘ಪಾರು’ ಸೀರಿಯಲ್ ಹೀರೋ; ‘ಅನಿಮಾ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಶರತ್ ಪದ್ಮನಾಭ್
- Sharath Padmanabh: ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಅಲಿಯಾಸ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಆಗಮಿಸಲಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಹೆಸರಿಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.

(1 / 7)
ಪಾರು ಧಾರಾವಾಹಿ ಮೂಲಕ ಕರುನಾಡ ಮನೆ ಮಂದಿಯ ಗಮನ ಸೆಳೆದ ನಟ ಶರತ್. ಇತ್ತೀಚೆಗಷ್ಟೇ ಈ ಧಾರಾವಾಹಿ ಅಂತ್ಯಕಂಡಿತು. ಈಗ ಇದೇ ಸೀರಿಯಲ್‌ನ ನಾಯಕರಾಗಿದ್ದ ಶರತ್, ಸಿನಿಮಾಕ್ಕೂ ಆಗಮಿಸಿದ್ದಾರೆ.
(2 / 7)
ಅನಿಮಾ ಹೆಸರಿನ ಸಿನಿಮಾದಲ್ಲಿ ಶರತ್ ನಟಿಸಲಿದ್ದಾರೆ. ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಈಗಾಗಲೇ ಶೂಟಿಂಗ್ ಸಹ ಆರಂಭಿಸಿದೆ.
(3 / 7)
ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್, ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ.
(4 / 7)
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಿಮಾ ಸಿನಿಮಾ ಕೊನೆ ಹಂತದ ಚಿತ್ರೀಕರಣದಲ್ಲಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗ್ಲೇ ಶೂಟಿಂಗ್ ನಡೆಸಲಾಗಿದೆ.
(5 / 7)
ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗ್ತಿದೆ. ಶರತ್ ನಾಯಕನಾಗಿ ನಟಿಸುತ್ತಿದ್ದು, ಅನುಷಾ ಕೃಷ್ಣ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.
ಇತರ ಗ್ಯಾಲರಿಗಳು