KaRaVe Protest in Bengaluru: ಬೆಳಗಾವಿ ಗಡಿ ವಿವಾದ; ʻಮಹಾʼಸರ್ಕಾರದ ವಿರುದ್ಧ ಬೀದಿಗಿಳಿದ ಕರವೇ; ಪೊಲೀಸರ ಜತೆಗೆ ಜಟಾಪಟಿ! Photos ಇಲ್ಲಿವೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karave Protest In Bengaluru: ಬೆಳಗಾವಿ ಗಡಿ ವಿವಾದ; ʻಮಹಾʼಸರ್ಕಾರದ ವಿರುದ್ಧ ಬೀದಿಗಿಳಿದ ಕರವೇ; ಪೊಲೀಸರ ಜತೆಗೆ ಜಟಾಪಟಿ! Photos ಇಲ್ಲಿವೆ

KaRaVe Protest in Bengaluru: ಬೆಳಗಾವಿ ಗಡಿ ವಿವಾದ; ʻಮಹಾʼಸರ್ಕಾರದ ವಿರುದ್ಧ ಬೀದಿಗಿಳಿದ ಕರವೇ; ಪೊಲೀಸರ ಜತೆಗೆ ಜಟಾಪಟಿ! Photos ಇಲ್ಲಿವೆ

KaRaVe Protest in Bengaluru: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ಪ್ರತಿಭಟನಾ ಸಂದರ್ಭದ ಫೋಟೋಸ್‌ ಇಲ್ಲಿವೆ. 

ಬೆಳಗಾವಿ ಗಡಿ ವಿವಾದ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರು ಅವರನ್ನು ಬಂಧಿಸಿದರು. ಈ ಸಂದರ್ಭದಲ್ಲಿ ನಡೆದ ಜಟಾಪಟಿ ಹೀಗಿತ್ತು. 
icon

(1 / 5)

ಬೆಳಗಾವಿ ಗಡಿ ವಿವಾದ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪೊಲೀಸರು ಅವರನ್ನು ಬಂಧಿಸಿದರು. ಈ ಸಂದರ್ಭದಲ್ಲಿ ನಡೆದ ಜಟಾಪಟಿ ಹೀಗಿತ್ತು. (PTI Photo/Shailendra Bhojak)

ಕರ್ನಾಟಕ ರಕ್ಷಣಾ ವೇದಿಕೆಯ ನಾಯಕ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಬಳಿಕ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನೂ ಸಲ್ಲಿಸಿದರು. 
icon

(2 / 5)

ಕರ್ನಾಟಕ ರಕ್ಷಣಾ ವೇದಿಕೆಯ ನಾಯಕ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಬಳಿಕ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನೂ ಸಲ್ಲಿಸಿದರು. (PTI Photo/Shailendra Bhojak)

ಬೆಂಗಳೂರಿನಲ್ಲಿ ಪ್ರತಿಭಟನಾ ನಿರತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಸ್ಥಳಾಂತರಿಸಿದರು. 
icon

(3 / 5)

ಬೆಂಗಳೂರಿನಲ್ಲಿ ಪ್ರತಿಭಟನಾ ನಿರತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಸ್ಥಳಾಂತರಿಸಿದರು. (PTI Photo/Shailendra Bhojak)

ಮಹಾರಾಷ್ಟ್ರ ಸರ್ಕಾರದ ಸಚಿವರು ಕರ್ನಾಟಕದ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ. ಇದು ಸರಿಯಲ್ಲ. ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಾರಾಯಣ ಗೌಡ ಇದೇ ವೇಳೆ ಆಗ್ರಹಿಸಿದರು. 
icon

(4 / 5)

ಮಹಾರಾಷ್ಟ್ರ ಸರ್ಕಾರದ ಸಚಿವರು ಕರ್ನಾಟಕದ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ. ಇದು ಸರಿಯಲ್ಲ. ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸುತ್ತಿರುವ ಗೂಂಡಾಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಾರಾಯಣ ಗೌಡ ಇದೇ ವೇಳೆ ಆಗ್ರಹಿಸಿದರು. (PTI Photo/Shailendra Bhojak)

ಪ್ರತಿಭಟನಾ ನಿರತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದ್ದು ಹೀಗೆ. 
icon

(5 / 5)

ಪ್ರತಿಭಟನಾ ನಿರತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದ್ದು ಹೀಗೆ. (PTI)


ಇತರ ಗ್ಯಾಲರಿಗಳು