Karnataka Budget 2025: ಕರ್ನಾಟಕದ ನ್ಯಾಯಾಲಯಗಳಲ್ಲೂ ಎಐ ತಂತ್ರಜ್ಞಾನದ ಬಳಕೆ, ಸ್ಮಾರ್ಟ್ ವ್ಯವಸ್ಥೆಗೂ ಬಜೆಟ್‌ನಲ್ಲಿ ಅನುದಾನ
- Karnataka Budget 2025: ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯಲ್ಲೂ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಅಳವಡಿಸಲು ಬೇಕಾದ ಆರ್ಥಿಕ ಬೆಂಬಲವನ್ನು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
- Karnataka Budget 2025: ಕರ್ನಾಟಕದ ನ್ಯಾಯಾಂಗ ವ್ಯವಸ್ಥೆಯಲ್ಲೂ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಅಳವಡಿಸಲು ಬೇಕಾದ ಆರ್ಥಿಕ ಬೆಂಬಲವನ್ನು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
(1 / 6)
ಆಧುನಿಕ ತಂತ್ರಜ್ಞಾನದ ಭಾಗವಾಗಿ ಎಐ ತಂತ್ರಜ್ಞಾನದ ಮೂಲಕ ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ, ನ್ಯಾಯಾಂಗ ದಾಖಲೆಗಳ ಅನುವಾದ ಮತ್ತಿತರ ಮಾಹಿತಿಯನ್ನು ಪಡೆಯಲು ಎರಡು ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ.
(michalsons)(2 / 6)
ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿನ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯಗಳನ್ನು ಪ್ರಾರಂಭಿಸಲು ಈ ಆರ್ಥಿಕ ವರ್ಷದಲ್ಲಿ ಎರಡು ಕೋಟಿ ರೂ. ಹಂಚಿಕೆ ಮಾಡಲಾಗಿದೆ.
(3 / 6)
ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವೊಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
(4 / 6)
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಕುರಿತಂತೆ ನ್ಯಾಯಾಲಯಗಳಲ್ಲಿ ದಾಖಲಿಸಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಕರಣಗಳ ವಿಶೇಷ ತ್ವರಿತಗತಿ (Fast-track) ನ್ಯಾಯಾಲಯವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ.
(5 / 6)
ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ 50 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ
ಇತರ ಗ್ಯಾಲರಿಗಳು








