ಸಚಿವ ಸಂಪುಟ ಮುನ್ನಾ ದಿನವೇ ಮಹದೇಶ್ವರ ಬೆಟ್ಟದಲ್ಲಿ ಡಿಸಿಎಂ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಭಕ್ತಿ ಭಾವ
ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಇದಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿಹೆಬ್ಬಾಳಕರ್ ಸಹಿತ ಹಲವರು ಆಗಮಿಸಿದ್ದು ಪೂಜೆಗಳನ್ನು ಸಲ್ಲಿಸಿದ್ದು ಹೀಗಿತ್ತು.
(1 / 8)
ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ನಿಮಿತ್ತ ಬುಧವಾರ ರಾತ್ರಿಯೇ ಬೆಟ್ಟಕ್ಕೆ ಭೇಟಿ ನೀಡಿ, ಪ್ರವೇಶ ದ್ವಾರದಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್.
(2 / 8)
ಮಲೈಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಲೇ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬರ ಮಾಡಿಕೊಂಡರು.
(3 / 8)
ನಂತರ ,ಮ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಹುಲಿಸವಾರಿ ಮಹದೇಶ್ವರ ಸ್ವಾಮಿಗಳ 108 ಅಡಿ ಎತ್ತರದ ಬೃಹತ್ ಪ್ರತಿಮೆಗೆ ನಮಿಸಿದರು ಡಿ.ಕೆ.ಶಿವಕುಮಾರ್.
(4 / 8)
ಮಲೈಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಲಾಗಿರುವ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ವಿವರಣೆ ನೀಡಿದರು.
(5 / 8)
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸ್ವಾಗತಿಸಲಾಯಿತು.
(7 / 8)
ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಬೆಟ್ಟಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರತಿ ಪಡೆದರು.
ಇತರ ಗ್ಯಾಲರಿಗಳು