ಆಧುನಿಕ 65 ಆ್ಯಂಬುಲೆನ್ಸ್​ಗೆ ಸಿದ್ದರಾಮಯ್ಯ ಚಾಲನೆ; ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದು ಎಂದ ಸಿಎಂ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆಧುನಿಕ 65 ಆ್ಯಂಬುಲೆನ್ಸ್​ಗೆ ಸಿದ್ದರಾಮಯ್ಯ ಚಾಲನೆ; ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದು ಎಂದ ಸಿಎಂ

ಆಧುನಿಕ 65 ಆ್ಯಂಬುಲೆನ್ಸ್​ಗೆ ಸಿದ್ದರಾಮಯ್ಯ ಚಾಲನೆ; ಸಂಚಾರಿ ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದು ಎಂದ ಸಿಎಂ

  • Chief Minister Siddaramaiah: ಆಧುನಿಕ‌ ಜೀವ ರಕ್ಷಕ ಸವಲತ್ತು ಹೊಂದಿರುವ 65 ಆ್ಯಂಬುಲೆನ್ಸ್​ಗಳನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಸಂಚಾರಿ ನಿಯಮ ಪಾಲಿಸದಿದ್ದರೆ, ಅಂತಹವರ ಪರವಾನಗಿ ರದ್ದುಗೊಳಿಸಿ ಎಂದು ಸಾರಿಗೆ ಸಚಿವರಿಗೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಧುನಿಕ‌ ಜೀವ ರಕ್ಷಕ ಸವಲತ್ತು ಹೊಂದಿರುವ 65 ಆ್ಯಂಬುಲೆನ್ಸ್​​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. 26 ಸುಧಾರಿತ ಹಾಗೂ 39 ಬೇಸಿಕ್​​ ಲೈಫ್ ಸಪೋರ್ಟ್​ ಆಂಬುಲೆನ್ಸ್​​ಗಳು ಜನರ ಸೇವೆಗೆ ಮುಕ್ತವಾಗಿವೆ.
icon

(1 / 10)

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲ್ಸ್​​ಗಳನ್ಮು ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದರು.
icon

(2 / 10)

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್​ಗಳು ನೆರವಾಗುತ್ತವೆ ಎಂದರು. 
icon

(3 / 10)

ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್​ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ‌ ಸವಲತ್ತುಗಳಿರುವ ಆ್ಯಂಬುಲೆನ್ಸ್​ಗಳನ್ನು ವಿಸ್ತರಿಸಲಾಗುವುದು ಎಂದಿದ್ದಾರೆ.
icon

(4 / 10)

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಚಾಲನೆ ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
icon

(5 / 10)

ಮೊಬೈಲ್​​ನಲ್ಲಿ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು ಸೂಚಿಸಿದರು. 
icon

(6 / 10)

ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರು, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿ ರದ್ದು ಮಾಡಿ ಎಂದು ಸಿದ್ದರಾಮಯ್ಯ ಅವರು, ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.
icon

(7 / 10)

ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಹಿಂದೆ 4 ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಅವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದು, ಹಿಂದೆ ಅವರು ಸಚಿವರಾಗಿದ್ದಾಗ ಕ್ರಮವೇಕೆ ತೆಗೆದುಕೊಳ್ಳಲಿಲ್ಲ ಎಂದು ಮರು ಪ್ರಶ್ನಿಸಿದರು. ರಾಜ್ಯಪಾಲರ ಪತ್ರ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
icon

(8 / 10)

ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ಮಾನ್ಯ ರಾಷ್ಟ್ರಪತಿಗಳಿಗೆ ದೂರು ಕೊಡುವ ವಿಚಾರ ಇದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ರಾಜ್ಯಪಾಲರು ಸಣ್ಣ ವಿಷಯಗಳ ಬಗ್ಗೆ ಗಮನ ಕೊಡುತ್ತಿದ್ದಾರೆ. ಕನ್ನಡದಲ್ಲಿ ಸಹಿ ಮಾಡುತ್ತಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವರದಿ ಕೇಳುವ ಬಗ್ಗೆ ಪ್ರಸ್ತಾಪಿಸಿ, ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪಲ್ಲ. ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು  ಉತ್ತರ ಕೇಳುವುದು ಸರಿಯಲ್ಲ ಎಂದು ತಿಳಿಸಿದರು.
icon

(9 / 10)

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್​ಎಂ ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
icon

(10 / 10)

ಇತರ ಗ್ಯಾಲರಿಗಳು