Kannada News  /  Photo Gallery  /  Karnataka Election Voting By Senior Leaders Including Former Pm Hd Deve Gowda Dks Siddaramaiah Shettar Photos Rmy

Karnataka Election: ಕರ್ನಾಟಕ ಚುನಾವಣೆ; ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಡಿಕೆಶಿ, ಸಿದ್ದರಾಮಯ್ಯ, ಶೆಟ್ಟರ್ ಸೇರಿ ಹಿರಿಯ ನಾಯಕರಿಂದ ಮತದಾನ

May 10, 2023 03:18 PM IST Raghavendra M Y
May 10, 2023 03:18 PM , IST

ರಾಜ್ಯದಲ್ಲಿ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಂದು ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿಎಂ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಶೆಟ್ಟರ್, ಎಚ್‌ಡಿ ಕಮಾರಸ್ವಾಮಿ ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಮತದಾನ ಮಾಡಿದ್ದಾರೆ.

(1 / 8)

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ದೊಡ್ಡಾಲಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಈ ಕ್ಷೇತ್ರದಲ್ಲಿ ಡಿಕೆಶಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಆರ್ ಅಶೋಕ್ ಸ್ಪರ್ಧಿಸಿದ್ದಾರೆ.

(2 / 8)

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸಮೇತರಾಗಿ ಮತಚಲಾಯಿಸಿದ್ದಾರೆ. ಶೆಟ್ಟರ್ ಅವರು ತಮ್ಮ ಕುಟುಂಬದವರ ಜೊತೆಯಲ್ಲಿ ಹುಬ್ಬಳ್ಳಿಯ ಕುಸುಗಲ್ ಎಸ್‌ಬಿಐ ಆಫೀಸರ್ಸ್ ಸೊಸೈಟಿ ಶಾಲೆಯಲ್ಲಿ ಮತಚಲಾಯಿಸಿದ್ದಾರೆ

(3 / 8)

ಮಾಜಿ ಸಚಿವ ಕೆ ಜೆ ಜಾರ್ಜ್ ಅವರು ಬೆಂಗಳೂರಿನ ಚಲ್ಲಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.

(4 / 8)

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರುಕೂಡ ಮತದಾನ ಮಾಡಿದ್ದಾರೆ.

(5 / 8)

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರುಕೂಡ ಮತದಾನ ಮಾಡಿದ್ದಾರೆ.

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ಹಾಗೂ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಕೂಡ ಮತದಾನ ಮಾಡಿದ್ದಾರೆ.

(6 / 8)

ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಸ್ವಕ್ಷೇತ್ರ ಶಿಗ್ಗಾವಿಯಲ್ಲಿ ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ಬಂದು ಮತದಾನ ಮಾಡಿದ್ದಾರೆ.

(7 / 8)

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದಕ್ಕೂ ಮುನ್ನ ಅವರು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದ್ದರು.

(8 / 8)

ಇತರ ಗ್ಯಾಲರಿಗಳು