ಮಂದರಗಿರಿ ಮರು ಸೃಷ್ಟಿ, ಸಿರಿಧಾನ್ಯ ಕಲಾಕೃತಿ ಆಕರ್ಷಣೆ; ತುಮಕೂರಿನಲ್ಲಿ ಜ 26ರಿಂದ ಫಲಪುಷ್ಪ ಪ್ರದರ್ಶನ
- ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಜನವರಿ 26ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ನಡೆಸಲಾಗುತ್ತಿದೆ. (ವರದಿ: ಈಶ್ವರ್, ತುಮಕೂರು)
- ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಜನವರಿ 26ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನವನ್ನು ನಗರದ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ನಡೆಸಲಾಗುತ್ತಿದೆ. (ವರದಿ: ಈಶ್ವರ್, ತುಮಕೂರು)
(1 / 8)
ತುಮಕೂರಿನಲ್ಲಿ ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ನೆರವಾಗುವ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಆಕರ್ಷಕ ವಿನ್ಯಾಸದ ಫಲ-ಪುಷ್ಪ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.
(2 / 8)
ಫಲಪುಷ್ಪ ಪ್ರದರ್ಶನದಲ್ಲಿ ಮಂದರಗಿರಿ ಮರು ಸೃಷ್ಟಿ, ಸಿರಿಧಾನ್ಯ ಕಲಾಕೃತಿ, ತರಕಾರಿ ಕೆತ್ತನೆಯಲ್ಲಿ ಇಸ್ರೋಗೆ ನಮನ, ರೈತ ಜೀವನ, ಮರಳು ಕಲಾಕೃತಿ, ಆಕರ್ಷಕ ವಿನ್ಯಾಸದ ಪುಷ್ಪ ಪ್ರದರ್ಶನ ವಿಶೇಷ ಆಕರ್ಷಣೆಯಾಗಿವೆ.
(3 / 8)
ಕೃಷಿ ಇಲಾಖೆಯಿಂದ ಪಾರಂಪರಿಕ ಹಾಗೂ ಆಧುನಿಕ ಕೃಷಿ ಸಲಕರಣೆಗಳು ಮತ್ತು ಯಂತ್ರೋಪಕರಣಗಳ ಪ್ರದರ್ಶನ, ಮೀನುಗಾರಿಕೆ ಇಲಾಖೆಯಿಂದ ಆಕರ್ಷಕ ಅಕ್ವೇರಿಯಂ ಪ್ರದರ್ಶನ, ಪಶು ಸಂಗೋಪನೆ ಇಲಾಖೆಯಿಂದ ದೇಶಿ ತಳಿಗಳ ಪರಿಚಯ, ರೇಷ್ಮೆ ಇಲಾಖೆಯಿಂದ ರೇಷ್ಮೆ ಗೂಡಿನ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ.
(4 / 8)
ಅರಣ್ಯ ಇಲಾಖೆಯಿಂದ ವನ್ಯ ಜಗತ್ತು ಪರಿಚಯ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದರಿ ಪ್ರದರ್ಶನ, ಸಾಮಾಜಿಕ ಅಭಿವೃದ್ಧಿಯಿಂದ ವಸತಿ ಶಿಕ್ಷಣ ಸಮುಚ್ಛಯ, ಗಂಗಾ ಕಲ್ಯಾಣ ಯೋಜನೆಗಳ ಅನಾವರಣವಾಗಲಿದೆ.
(5 / 8)
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನಮ್ಮೂರ ರೇಷ್ಮೆ, ಗ್ರಂಥಾಲಯದಿಂದ ಜ್ಞಾನ ಭಂಡಾರ, ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ತಾಣಗಳ ಛಾಯಚಿತ್ರ ಪ್ರದರ್ಶನವಾಗಲಿದೆ.
(6 / 8)
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಸೇವೆಗಳ ಪರಿಚಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಮ್ಮೂರ ಅಂಗನವಾಡಿ ಮಾದರಿ, ಶಿಕ್ಷಣ ಇಲಾಖೆಯಿಂದ ವಿಜ್ಞಾನ ಲೋಕ, ಬೆಸ್ಕಾಂ ವತಿಯಿಂದ ಗೃಹ ಜ್ಯೋತಿ ಮಾದರಿ ಪ್ರದರ್ಶನ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.
(7 / 8)
ಫಲಪುಷ್ಪ ಪ್ರದರ್ಶನ ಅಂಗವಾಗಿ ಉದ್ಯಾನವನ ಮಾದರಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.
ಇತರ ಗ್ಯಾಲರಿಗಳು