ಮಲೈ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ, ಬಹುತೇಕ ಸಚಿವರು ಭಾಗಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಲೈ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ, ಬಹುತೇಕ ಸಚಿವರು ಭಾಗಿ

ಮಲೈ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ, ಬಹುತೇಕ ಸಚಿವರು ಭಾಗಿ

ಬೆಂಗಳೂರಿನಿಂದ ಹೊರಗೆ ಸಚಿವ ಸಂಪುಟ ವಿಶೇಷ ಸಭೆಯು ಚಾಮರಾಜನಗರ ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭಗೊಂಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಲೈ ಮಹದೇಶ್ವರ ಬೆಟ್ಟದಲ್ಲಿ ಆರಂಭಗೊಂಡ ಸಚಿವ ಸಂಪುಟ ವಿಶೇಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಭಾಗಿಯಾದರು.
icon

(1 / 7)

ಈ ಹಿಂದೆ ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯು ನಡೆದಿತ್ತು. ಈ ಬಾರಿ ಮಲೈಮಹದೇಶ್ವರ ಬೆಟ್ಟದಲ್ಲಿ ಸಭೆ ಆಯೋಜಿಸಿರುವುದು ವಿಶೇಷ.
icon

(2 / 7)

ಕಲಬುರಗಿಯಲ್ಲಿ ಕಳೆದ ಬಾರಿ ವಿಶೇಷ ಸಚಿವ ಸಂಪುಟ ಸಭೆ ನಡೆದಿತ್ತು. ಈ ಬಾರಿ ಕರ್ನಾಟಕದ ಹಲವು ವಿಷಯಗಳ ಕುರಿತು ಸಚಿವ ಸಂಪುಟ ಸಭೆಯು ತೀರ್ಮಾನ ಕೈಗೊಳ್ಳಲಿದೆ.
icon

(3 / 7)

ವಿಶೇಷವಾಗಿ ಚಾಮರಾಜನಗರ ಭಾಗದ ಬಹುದಿನದ ಬೇಡಿಕೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯಗಳನ್ನು ಸಚಿವ ಸಂಪುಟ ಸಭೆ ಕೈಗೊಳ್ಳುವ ನಿರೀಕ್ಷಯಿದೆ.
icon

(4 / 7)

ಪ್ರಮುಖ ಪ್ರವಾಸಿ ತಾಣವೂ ಆಗಿರುವ ಧಾರ್ಮಿ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಅಭಿವೃದ್ದಿಗೆ ಸಂಬಂಧಿಸಿಯೂ  ಬೇಡಿಕೆಗಳಿವೆ.
icon

(5 / 7)

ಎಸ್‌ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಮೈಸೂರು ಜಿಲ್ಲೆಯ ಎಚ್‌ಡಿಕೋಟೆ ತಾಲ್ಲೂಕಿನ ವಿವೇಕಾನಂದ ಗಿರಿಜನ ಶಿಕ್ಷಣ ಸಂಸ್ಥೆಯಲ್ಲೂ ಇದೇ ರೀತಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು.
icon

(6 / 7)

ಮಲೈ ಮಹದೇಶ್ವರ ಬೆಟ್ಟದ  ಸಚಿವ ಸಂಪುಟ ಸಭೆಗೆ ಒಂದಿಬ್ಬರು ಸಚಿವರು ಬಿಟ್ಟರೆ ಬಹುತೇಕರು ಭಾಗಿಯಾಗಿದ್ದಾರೆ.
icon

(7 / 7)

ಮಲೈ ಮಹದೇಶ್ವರ ಬೆಟ್ಟದ ಸಚಿವ ಸಂಪುಟ ಸಭೆಗೆ ಒಂದಿಬ್ಬರು ಸಚಿವರು ಬಿಟ್ಟರೆ ಬಹುತೇಕರು ಭಾಗಿಯಾಗಿದ್ದಾರೆ.

ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.

ಇತರ ಗ್ಯಾಲರಿಗಳು