ಭಾರಿ ಮಳೆಗೆ ಮಂಗಳೂರು ಸಹಿತ ಕರಾವಳಿ ಜನಜೀವನ ಅಸ್ತವ್ಯಸ್ತ, ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿ, ಉರುಳಿದ ಮರಗಳು -Photos
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಭಾರಿ ಮಳೆಗೆ ಮಂಗಳೂರು ಸಹಿತ ಕರಾವಳಿ ಜನಜೀವನ ಅಸ್ತವ್ಯಸ್ತ, ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿ, ಉರುಳಿದ ಮರಗಳು -Photos

ಭಾರಿ ಮಳೆಗೆ ಮಂಗಳೂರು ಸಹಿತ ಕರಾವಳಿ ಜನಜೀವನ ಅಸ್ತವ್ಯಸ್ತ, ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿ, ಉರುಳಿದ ಮರಗಳು -Photos

ಮಂಗಳೂರು: ಭಾನುವಾರ ಕಡಲತೀರ ಮಂಗಳೂರು ಸಹಿತ ಕರಾವಳಿಯಾದ್ಯಂತ ಭಾರಿ ಗಾಳಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ದುರ್ಘಟನೆಗಳು ಸಂಭವಿಸಿವೆ. ದಕ್ಷಿಣ ಕನ್ನಡದಲ್ಲಿ ಭಾನುವಾರ (ಮೇ 25) ಬೆಳಗ್ಗಿನಿಂದ ಸಂಜೆವರೆಗೆ ನಡೆದ ಘಟನಾವಳಿಗಳು ಇಲ್ಲಿವೆ. (ವರದಿ: ಹರೀಶ್‌ ಮಾಂಬಾಡಿ, ಮಂಗಳೂರು)

ಪಂಪ್ವೆಲ್‌ನಲ್ಲಿ ಹೊಳೆಯಂತಾದ ರಸ್ತೆ: ಮಂಗಳೂರು ಪಂಪ್ವೆಲ್ ಜಂಕ್ಷನ್ ಮಧ್ಯಾಹ್ನ ಸುರಿದ ಮಳೆಗೆ ಹೊಳೆಯಂತಾಗಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸುಮಾರು ಎರಡು ಗಂಟೆ ಸುರಿದ ಮಳೆಗೆ ರಾಜಾಕಾಲುವೆ ತುಂಬಿ ಹರಿದು, ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿತು.
icon

(1 / 8)

ಉರುಳಿದ ಮರ, ಹಲವೆಡೆ ಅನಾಹುತ: ಮಂಗಳೂರು ಲೇಡಿಹಿಲ್ ಬಳಿ ಮರವೊಂದು ಉರುಳಿಬಿದ್ದಿದೆ. ಚಿಲಿಂಬಿಯಲ್ಲಿ ನಾಲ್ಕು ಮರಗಳು ಉರುಳಿಬಿದ್ದಿವೆ. ಆಟೊ ಕಾರು, ಬಸ್ಸು ಸೇರಿದಂತೆ ನಾಲ್ಕು ವಾಹನಗಳು ಜಖಂಗೊಂಡಿವೆ.
icon

(2 / 8)

ಕಡಬದಲ್ಲಿ ಕಾರಿನ  ಮೇಲೆ ಬಿದ್ದ ಮರ, ನಾಲ್ವರಿಗೆ ಗಾಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ನೂಜಿಬಾಳ್ತಿಲ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು, ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಕುಕ್ಕೆಸುಬ್ರಹ್ಮಣ್ಯದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಎಂಬಲ್ಲಿ ಮರವೊಂದು ಮುರಿದುಬಿದ್ದಿದೆ. ಭಾರಿ ಗಾಳಿ ಮಳೆ ಸುರಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಲ್ಲಿ ಸಿಲುಕಿಕೊಂಡಿತು. ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಅವರನ್ನು ಸಾಗಿಸಲಾಯಿತು.
icon

(3 / 8)

ಪುತ್ತೂರು ನಗರಸಭೆಯ ಕೌಂಪೌಂಡ್ ಕುಸಿದುಬಿದ್ದಿದ್ದು, ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
icon

(4 / 8)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ದಳದ(ಎನ್‌ಡಿಆರ್‌ಎಫ್) ಒಂದು ತಂಡವನ್ನು ಪುತ್ತೂರಿನಲ್ಲಿ ಇಡಲಾಗುವುದು. ರಾಜ್ಯ ವಿಪತ್ತು ದಳದ (ಎಸ್‌ಡಿಆರ್‌ಎಫ್) ಎರಡು ತಂಡಗಳನ್ನು ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇರಿಸಲಾಗಿದೆ ಎಂದು ಡಿಸಿ ಹೇಳಿದ್ದಾರೆ.
icon

(5 / 8)

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಹಳೆ ಕಟ್ಟಡದ ಗೋಡೆ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ಕುಸಿದು ಬಿದ್ದಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಇತ್ತೀಚೆಗೆ ಈ ಕಟ್ಟಡವನ್ನು ನೆಲಸಮಗೊಳಿಸಲಾಗಿತ್ತು ಆದರೆ ಗೋಡೆಯ ಒಂದು ಪಾರ್ಶ್ವವನ್ನು ಹಾಗೇ ಬಿಡಲಾಗಿತ್ತು. ಇಂದು ಸುರಿದ ಭಾರಿ ಮಳೆಗೆ ಗೋಡೆ ಕುಸಿದಿದೆ ಎಂದು ಮಾಹಿತಿ ತಿಳಿದಿದೆ. (ಮಳೆಯಿಂದ ಹಾನಿಯಾದ ಪ್ರದೇಶದ ಚಿತ್ರ)
icon

(6 / 8)

ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಜೀವನದಿ ನೇತ್ರಾವತಿ ತುಂಬಿ ಹರಿಯುತ್ತಿದ್ದು ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕಾಯರ್ತೋಡಿ ಎಂಬಲ್ಲಿ ಅಡಕೆ ತೋಟಕ್ಕೆ ನದಿ‌ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ.ಒಟ್ಟಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುವ ಮಳೆಯಿಂದಾಗಿ ಯಾವೆಲ್ಲ ಪ್ರದೇಶಗಳಲ್ಲಿ ಹಾನಿಗೊಳಗಾಗಿದೆ ಎಂದು ಮುಂದೆ ಕಾದುನೋಡಬೇಕಾಗಿದೆ. (ಮಂಗಳೂರಿನ ಪಂಪ್ವೆಲ್‌ ಚಿತ್ರ)
icon

(7 / 8)

ಮಳೆಯ ನಡುವೆಯೇ ರಸ್ತೆಯಲ್ಲಿ ಹೊತ್ತಿ ಉರಿದ ಕಾರು: ಧಾರಾಕಾರವಾಗಿ ಮಳೆಯಾಗುತ್ತಿರುವಾಗಲೇ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ವಿಲಕ್ಷಣ ಘಟನೆಯೂ ಸಂಭವಿಸಿತು. ಮಂಗಳೂರಿನ ಕುಲಶೇಖರ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಬೋನೆಟ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಕಾರಲ್ಲಿದ್ದವರು ಹೊರಬಂದು ಅಪಾಯದಿಂದ ಪಾರಾದರು.
icon

(8 / 8)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು