ಕನ್ನಡ ಸಾಹಿತ್ಯ ಸಮ್ಮೇಳನ; ಸಕ್ಕರೆ ನಾಡಲ್ಲಿ ಅಕ್ಷರ ಜಾತ್ರೆಗೆ ಅಧಿಕೃತ ಚಾಲನೆ, ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆಯ ಆಕರ್ಷಕ ಚಿತ್ರನೋಟ
Kannada Sahitya Sammelana: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಅಕ್ಷರ ಜಾತ್ರೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಧ್ವಜಾರೋಹಣದೊಂದಿಗೆ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳು ಅಧಿಕೃತವಾಗಿ ಶುರುವಾಗಿದೆ. ಸಮ್ಮೇಳನಾಧ್ಯಕ್ಷ ಗೊ ರು ಚನ್ನಬಸಪ್ಪ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನ ಸಭಾಂಗಣಕ್ಕೆ ಕರೆದೊಯ್ಯಲಾಗುತ್ತಿದ್ದ, ಆಕರ್ಷಕ ಫೋಟೋಸ್ ಇಲ್ಲಿವೆ.
(1 / 11)
Kannada Sahitya Sammelana: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಅಕ್ಷರ ಜಾತ್ರೆಗೆ ಅಧಿಕೃತ ಚಾಲನೆ ಸಿಕ್ಕಿದೆ. 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳು ಶುರುವಾಗಿದ್ದು, ಧ್ವಜಾರೋಹಣವಾದ ಬಳಿಕ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಶುರುವಾಗಿದೆ.
(2 / 11)
ಧ್ವಜಾರೋಹಣದೊಂದಿಗೆ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳು ಅಧಿಕೃತವಾಗಿ ಶುರುವಾಗಿದೆ. ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್ ಚಲುವರಾಯ ಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜ, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು.
(3 / 11)
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧ್ವಜಾರೋಹಣದ ವೇಳೆ ಧ್ವಜ ವಂದನೆ ಸಲ್ಲಿಸಿದ ಭಾರತ ಸೇವಾ ದಳದ ಮಕ್ಕಳು.
(4 / 11)
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ, ಎಂಎಲ್‌ಸಿ ದಿನೇಶ್ ಗೂಳಿಗೌಡ, ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸಮ್ಮೇಳನದ ಅತಿಥಿ ಅಭ್ಯಾಗತರು ಉಪಸ್ಥಿತರಿದ್ದರು
(5 / 11)
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ ನೀಡಿದರು.
(6 / 11)
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ನಗಾರಿ ಬಡಿದರು.
(7 / 11)
ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದ ವೇಳೆ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ, ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ರುಶೋತ್ತಮಾನಂದ ಸ್ವಾಮೀಜಿ , ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ , ಶಾಸಕರಾದ ನರೇಂದ್ರಸ್ವಾಮಿ, ರವಿ ಕುಮಾರ್ ,ಮಧು ಮಾದೇಗೌಡ,ದಿನೇಶ್ ಗೂಳಿಗೌಡ ,ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಮತ್ತಿತರರು ಉಪಸ್ಥಿತರಿದ್ದರು.
(8 / 11)
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಅವರು ಸಮ್ಮೇಳನ ಸ್ಥಳಕ್ಕೆ ಮೆರವಣಿಗೆ ಮೂಲಕ ಸಾಗಲು ಸಾರೋಟು ಏರಿ ಕುಳಿತ ಸಂದರ್ಭ.
(10 / 11)
ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ ಡೊಳ್ಳು ಕುಣಿತದ ಮಹಿಳಾ ತಂಡದ ಸದಸ್ಯರ ಸಂಭ್ರಮ, ಸಡಗರ.
ಇತರ ಗ್ಯಾಲರಿಗಳು