ಕರ್ನಾಟಕ ಲಾರಿ ಮುಷ್ಕರ; ಡೀಸೆಲ್ ಸುಂಕ ಇಳಿಕೆಗೆ ಒಪ್ಪದ ಸಿಎಂ ಸಿದ್ದರಾಮಯ್ಯ, ಫಲ ಕೊಡದ ಸಂಧಾನ ಮಾತುಕತೆ- ಚಿತ್ರನೋಟ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕ ಲಾರಿ ಮುಷ್ಕರ; ಡೀಸೆಲ್ ಸುಂಕ ಇಳಿಕೆಗೆ ಒಪ್ಪದ ಸಿಎಂ ಸಿದ್ದರಾಮಯ್ಯ, ಫಲ ಕೊಡದ ಸಂಧಾನ ಮಾತುಕತೆ- ಚಿತ್ರನೋಟ

ಕರ್ನಾಟಕ ಲಾರಿ ಮುಷ್ಕರ; ಡೀಸೆಲ್ ಸುಂಕ ಇಳಿಕೆಗೆ ಒಪ್ಪದ ಸಿಎಂ ಸಿದ್ದರಾಮಯ್ಯ, ಫಲ ಕೊಡದ ಸಂಧಾನ ಮಾತುಕತೆ- ಚಿತ್ರನೋಟ

ಕರ್ನಾಟಕ ಲಾರಿ ಮುಷ್ಕರ ನಿನ್ನೆ ತಡರಾತ್ರಿಯಿಂದ ಶುರುವಾಗಿದ್ದು, ಇಂದು (ಏಪ್ರಿಲ್ 15) ಸಂಜೆ ಲಾರಿ ಮಾಲೀಕರು ಸಿಎಂ ಜತೆಗೆ ಮಾತುಕತೆ ನಡೆಸಿದರು. ಈ ವೇಳೆ ಲಾರಿ ಮಾಲೀಕರು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಡೀಸೆಲ್ ಸುಂಕ ಇಳಿಕೆಗೆ ಒಪ್ಪಲಿಲ್ಲ. ಹೀಗಾಗಿ, ಸಂಧಾನ ಮಾತುಕತೆ ಫಲ ಕೊಡಲಿಲ್ಲ. ಮಾತುಕತೆಯ ಚಿತ್ರನೋಟ ಇಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕಾವೇರಿಯಲ್ಲಿ ಇಂದು ಸಂಜೆ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಲಾರಿ ಮಾಲೀಕರ ಸಂಘದ ಅ‍ಧ್ಯಕ್ಷ ಷಣ್ಮುಖಪ್ಪ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
icon

(1 / 8)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಲಾರಿ ಮತ್ತು ಟ್ರಕ್ ಮಾಲೀಕ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
icon

(2 / 8)

ಈ ಬಾರಿ ಕರ್ನಾಟಕ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
icon

(3 / 8)

ಲಾರಿ ಮಾಲೀಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
icon

(4 / 8)

ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದರು.
icon

(5 / 8)

ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲಿಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
icon

(6 / 8)

ಲಾರಿ ಮಾಲೀಕರ ಸಂಘದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೀಸೆಲ್ ಸುಂಕ ಇಳಿಸಲು ಒಪ್ಪದ ಕಾರಣ, ಸಂಧಾನ ಮಾತುಕತೆ ಫಲ ನೀಡಿಲ್ಲ. ಲಾರಿ ಮಾಲೀಕರ ಮುಷ್ಕರ ಮುಂದುವರಿದಿದೆ.
icon

(7 / 8)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಏಪ್ರಿಲ್ 15) ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ತಮ್ಮ ಗೃಹ ಕಚೇರಿ ಕಾವೇರಿಯಲ್ಲಿ  ಸಭೆ ನಡೆಸಿದರು. ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
icon

(8 / 8)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.

ಇತರ ಗ್ಯಾಲರಿಗಳು