ಭಾರಿ ಮಳೆ ಮುನ್ಸೂಚನೆಯಿಂದ ರೆಡ್ ಅಲರ್ಟ್; ಜುಲೈ 9 ರಂದು ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
- ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡದ 2 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜುಲೈ 9 ರಂದು ರಜೆ ಘೋಷಿಸಲಾಗಿದೆ. ಉತ್ತರ ಕನ್ನಡದ 2 ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
(1 / 6)
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.(AFP)
(2 / 6)
ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಿಸಿದೆ. (AFP)
(3 / 6)
ಉಡುಪಿ ಜಿಲ್ಲೆಯಲ್ಲೂ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಇಡೀ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.(PTI)
(4 / 6)
ಭಾರಿ ಮಳೆ ಹಿನ್ನೆಲೆಯಲ್ಲಿ ನದಿ, ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂಥ ಕಟ್ಟಡಗಳಲ್ಲಿ ಪಾಠ ಮಾಡಬಾರದು. ಶಾಲಾ, ಕಾಲೇಜುಗಳ ಮುಖ್ಯಸ್ಥರು ಕಟ್ಟಡದ ಸುಸ್ಥಿತಿ ಕುರಿತು ಗಮನ ಹರಿಸಬೇಕು.(PTI)
(5 / 6)
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗರೂಕತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಾರ್ವಜನಿಕರು ನದಿ, ತೋಡು, ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(HT_PRINT)
ಇತರ ಗ್ಯಾಲರಿಗಳು