ಮತ್ತೆ ಉದಯಿಸಿದ ಕಾಂಗ್ರೆಸ್, ಕುಮಾರಸ್ವಾಮಿ ಬಾಯಿಗೆ ಸಕ್ಕರೆ ಹಾಕಿದ ಮಂಡ್ಯ; ಮೈಸೂರು ಭಾಗದಲ್ಲಿ ಸೋಲು-ಗೆಲುವು ಯಾರಿಗೆ?
- Lok Sabha Election 2024 Result : ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತೆ ಉದಯಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಒಂದೂ ಕ್ಷೇತ್ರವನ್ನೂ ಗೆದ್ದಿರಲಿಲ್ಲ.
- Lok Sabha Election 2024 Result : ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತೆ ಉದಯಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಒಂದೂ ಕ್ಷೇತ್ರವನ್ನೂ ಗೆದ್ದಿರಲಿಲ್ಲ.
(1 / 7)
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ನ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರು ಸೋಲು ಕಂಡಿದ್ದಾರೆ.
(2 / 7)
ಕಳೆದ ಬಾರಿ ಬಿಜೆಪಿ ಜಯಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಚಿವನ ಪುತ್ರ ಸುನಿಲ್ ಬೋಸ್ ಅವರು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜ್ ವಿರುದ್ಧ ಗೆದ್ದು ಬೀಗಿದ್ದಾರೆ.
(3 / 7)
ಎರಡು ದಶಕಗಳ ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ 20 ವರ್ಷಗಳ ನಂತರ ಸೋಲು ಕಂಡಿದೆ. ಪೆನ್ಡ್ರೈವ್ ಕೇಸ್ನಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ ಶ್ರೇಯಸ್ ಪಟೇಲ್ ಎದುರು ಸೋತಿದ್ದಾರೆ.
(4 / 7)
ದಾವಣೆಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದಿದ್ದಾರೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಿಎಂ ಸಿದ್ಧೇಶ್ವರ ಅವರು ಗೆದ್ದಿದ್ದರು. ಈ ಬಾರಿ ಅವರ ಪತ್ನಿಗೆ ಟಿಕೆಟ್ ನೀಡಲಾಗಿತ್ತು. ಆದರೆ ಗಾಯತ್ರಿ ಸಿದ್ಧೇಶ್ವರ ಅವರು ಗೆಲ್ಲಲು ವಿಫಲರಾದರು.
(5 / 7)
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದ ಪ್ರತಾಪ್ ಸಿಂಹ ಅವರನ್ನು ಕೈಬಿಟ್ಟು ರಾಜವಂಶಸ್ಥ ಯದುವೀರ್ ಒಡೆಯರ್ಗೆ ಟಿಕೆಟ್ ನೀಡಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಮತ್ತು ಯದುವೀರ್ ನಡುವಿನ ಗೆಲುವಿನ ಸಾಧ್ಯತೆ 50-50 ಇತ್ತು.ಕೊನೆಗೆ ಯಧುವೀರ್ ಗೆದ್ದು ಬೀಗುವಲ್ಲಿ ಯಶಸ್ವಿಯಾಗಿದ್ದಾರೆ.
(6 / 7)
ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ವಿ ಸೋಮಣ್ಣ, ವಲಸೆ ಹೋಗಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಸ್ಪಿ ಮುದ್ದಹನುಮೇಗೌಡ ಅವರನ್ನು ಮಣಿಸಿದ್ದಾರೆ.
ಇತರ ಗ್ಯಾಲರಿಗಳು