Congress Protest: ರಾಹುಲ್ ಗಾಂಧಿ ಪರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ; ಬಾಯಿಗೆ ಕಪ್ಪು ಪಟ್ಟಿ ಧರಿಸಿದ ಸಿದ್ದು, ಡಿಕೆಶಿ
- Congress Protest: ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು ಎದುರಿಸುತ್ತಿರುವ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.
- Congress Protest: ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು ಎದುರಿಸುತ್ತಿರುವ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.
(1 / 9)
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರವಾಗಿ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ ನಡೆಯಿತು.
(2 / 9)
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಪ್ರಮುಖ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮೌನ ಪ್ರತಿಭಟನೆ ನಡೆಸಿದರು.
(3 / 9)
ರಾಹುಲ್ ಗಾಂಧಿ ವಿರುದ್ದ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ನಡೆಸುತ್ತಿದ್ದ ಮೌನ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ
(4 / 9)
ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
(5 / 9)
ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.
(6 / 9)
ಈ ಕಾರಣಕ್ಕೆ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
(7 / 9)
ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಬಿಜೆಪಿಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಳಗಲಿ, ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಭಿತ್ತಿ ಪತ್ರಗಳನ್ನೂ ಸಿದ್ಧರಾಮಯ್ಯ, ಸುರ್ಜೇವಾಲಾ ಪ್ರದರ್ಶಿಸಿದರು.
(8 / 9)
ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಯುಬಿ ಬಣಕಾರ್, ಎಆರ್ ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇತರ ಗ್ಯಾಲರಿಗಳು