ಕನ್ನಡ ಸುದ್ದಿ  /  Photo Gallery  /  Karnataka Rain Update Cyclone Effect Expected Heavy Rain In Many District Imd Weather Update Kannada News Rst

Rain Update: ಚಂಡಮಾರುತ ಪರಿಣಾಮ; ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ; ಮನೆಯಿಂದ ಹೊರ ಹೊರಡುವ ಮುನ್ನ ಯೋಚಿಸಿ

  • Mocha Cyclone: ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಇದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮತದಾನಕ್ಕೂ ಮಳೆ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ. 
CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಮುಂದಿನ ಒಂದು ವಾರಗಳ ಕಾಲ ಅಂದರೆ ಮೇ 14ನೇ ತಾರೀಕಿನವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,
icon

(1 / 7)

ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಮುಂದಿನ ಒಂದು ವಾರಗಳ ಕಾಲ ಅಂದರೆ ಮೇ 14ನೇ ತಾರೀಕಿನವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,(HT Photo/Sanchit Khanna)

ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಇದರಿಂದ ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಡ್ಡಿಯಾಗುವ ಸಂಭವವೂ ಹೆಚ್ಚಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. 
icon

(2 / 7)

ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಇದರಿಂದ ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಡ್ಡಿಯಾಗುವ ಸಂಭವವೂ ಹೆಚ್ಚಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. (HT File Photo)

ಮೇ 8 ಹಾಗೂ 9 ರಂದು ಉಡುಪಿ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ಕೊಡಗು, ಬಾಗಲಕೋಟೆ, ಹಾವೇರಿ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ತುಮಕೂರು, ಕೋಲಾರ, ಗದಗ, ವಿಜಯಪುರ, ಹುಬ್ಬಳ್ಳಿ ಹಾಗೂ ಬೆಂಗಳೂರು ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 
icon

(3 / 7)

ಮೇ 8 ಹಾಗೂ 9 ರಂದು ಉಡುಪಿ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ಕೊಡಗು, ಬಾಗಲಕೋಟೆ, ಹಾವೇರಿ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ತುಮಕೂರು, ಕೋಲಾರ, ಗದಗ, ವಿಜಯಪುರ, ಹುಬ್ಬಳ್ಳಿ ಹಾಗೂ ಬೆಂಗಳೂರು ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. (AFP)

ಭಾರತೀಯ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದ್ದು, ಮತದಾನದಂದು ಇವಿಎಂಗಳು, ವಿವಿ ಪ್ಯಾಟ್‌ಗಳ ಸಾಗಣೆಗೆ ತೊಂದರೆಯಾಗಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 
icon

(4 / 7)

ಭಾರತೀಯ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದ್ದು, ಮತದಾನದಂದು ಇವಿಎಂಗಳು, ವಿವಿ ಪ್ಯಾಟ್‌ಗಳ ಸಾಗಣೆಗೆ ತೊಂದರೆಯಾಗಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. (PTI)

ಮೇ ತಿಂಗಳ 2ನೇ ವಾರದ ನಂತರ ವಾತಾವರಣ ಬದಲಾಗುವ ಸಾಧ್ಯತೆ ಇದ್ದು, ನಂತರ ಮಧ್ಯೆ ಮಧ್ಯೆ ಬಿಸಿಲಿನ ತಾಪವೂ ಕಾಣಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 
icon

(5 / 7)

ಮೇ ತಿಂಗಳ 2ನೇ ವಾರದ ನಂತರ ವಾತಾವರಣ ಬದಲಾಗುವ ಸಾಧ್ಯತೆ ಇದ್ದು, ನಂತರ ಮಧ್ಯೆ ಮಧ್ಯೆ ಬಿಸಿಲಿನ ತಾಪವೂ ಕಾಣಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ANI)

ಮೇ 14ರಂದು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. 
icon

(6 / 7)

ಮೇ 14ರಂದು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. (PTI)

ಒಟ್ಟಾರೆ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮನೆಯಿಂದ ಹೊರ ಹೊರಡುವ ಮುನ್ನ ಯೋಚಿಸಿ. ಛತ್ರಿ, ರೇನ್‌ಕೋಟ್‌ ಇಲ್ಲದೆ ಹೊರಗೆ ಹೊರಡಬೇಡಿ. 
icon

(7 / 7)

ಒಟ್ಟಾರೆ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮನೆಯಿಂದ ಹೊರ ಹೊರಡುವ ಮುನ್ನ ಯೋಚಿಸಿ. ಛತ್ರಿ, ರೇನ್‌ಕೋಟ್‌ ಇಲ್ಲದೆ ಹೊರಗೆ ಹೊರಡಬೇಡಿ. (PTI)


IPL_Entry_Point

ಇತರ ಗ್ಯಾಲರಿಗಳು