Karnataka Rains: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಉಕ್ಕಿ ಹರಿಯುತ್ತಿರುವ ನದಿಗಳು, ಹೀಗಿದೆ ಚಿತ್ರಣ photos
- Rain Updates ಕರ್ನಾಟಕದ ನಾನಾ ಭಾಗಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಭಾಗದಲ್ಲಿ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ.ಅಲ್ಲಲ್ಲಿ ಮರ ಉರುಳಿದ, ಭೂಕುಸಿತವಾದ ವರದಿಯಾಗಿದೆ. ಈ ಕುರಿತು ಚಿತ್ರ ನೋಟ ಇಲ್ಲಿದೆ.

(1 / 8)
ಭಾರೀ ಮಳೆಯಿಂದಾಗಿ ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಹೆಚ್ಚಿನ ನೀರು ಬಂದಿದೆ. ಅದರಲ್ಲೂ ತ್ರಿವೇಣಿ ಸಂಗಮ ಭಾಗಮಂಡಲದ ದೇಗುಲ ಸುತ್ತಾ ನೀರು ನಿಂತಿದೆ.
(3 / 8)
ಭಾರೀ ಮಳೆಯ ಕಾರಣದಿಂದ ಕೊಡಗಿನಲ್ಲಿ ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಡಿಕೇರಿ ನಾಪೊಕ್ಲು ಸೇತುವೆ ಬಳಿ ಹೆಚ್ಚಿನ ನೀರು ಹರಿಯುತ್ತಿದೆ.
(4 / 8)
ದಕ್ಷಿಣ ಕನ್ನಡ ಭಾಗದಲ್ಲೂ ಮಳೆಯಾಗಿ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಇದರಲ್ಲಿಯೇ ಪ್ರವಾಸಿಗರು ಸ್ನಾನ ಮಾಡುತ್ತಿರುವುದು ಕಂಡು ಬಂದಿತು.
(5 / 8)
ಎಡಬಿಡದೇ ಸುರಿದ ಭಾರೀ ಮಳೆಯಿಂದ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಂಬರಡಿ ಬಳಿ ರಸ್ತೆಯೇ ಬಿರುಕು ಬಿಟ್ಟಿದೆ.
(6 / 8)
ಭಾರೀ ಮಳೆ ಸುರಿದು ಚಿಕ್ಕಮಗಳೂರು ಭಾಗದಲ್ಲೂ ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ. ಹಳ್ಳ, ತೊರೆಗಳು ಉಕ್ಕಿ ಹರಿಯುತ್ತಿವೆ.
(7 / 8)
ಮಳೆಯ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನೇತ್ರಾವತಿ ನದಿಯ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ.
ಇತರ ಗ್ಯಾಲರಿಗಳು