Landslide in Charmadi: ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ, ವಾಹನ ಸಂಚಾರದಲ್ಲಿ ವ್ಯತ್ಯಯ photos
- Coastal Rain Updates ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ಅಲ್ಲಿನ ಚಿತ್ರಣ ಹೀಗಿದೆ.
- ಚಿತ್ರ- ಮಾಹಿತಿ: ಹರೀಶ ಮಾಂಬಾಡಿ, ಮಂಗಳೂರು
- Coastal Rain Updates ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ಅಲ್ಲಿನ ಚಿತ್ರಣ ಹೀಗಿದೆ.
- ಚಿತ್ರ- ಮಾಹಿತಿ: ಹರೀಶ ಮಾಂಬಾಡಿ, ಮಂಗಳೂರು
(1 / 6)
ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಮರಗಳು ಬಿದ್ದು ವಾಹನ ಸಂಚಾರ ಬಂದ್ ಆಗಿದೆ.
(2 / 6)
ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಪೊಲೀಸ್ ಗಸ್ತು ಹಾಕಲಾಗಿದೆ.
(3 / 6)
ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ.
(4 / 6)
ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿರುವುದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡು ಬರುತ್ತಿದೆ.
(5 / 6)
ಕಿರಿದಾದ ಅಪಾಯಕಾರಿ ರಸ್ತೆಯಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದೆ. ಚಾರ್ಮಾಡಿ ಘಾಟಿಗೆ ತೆರಳದಂತೆ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು ವಾಹನಗಳು ಅಲ್ಲಲ್ಲಿ ಸಾಲುಗಟ್ಟಿ ನಿಂತಿರುವುದು ಸಾಮಾನ್ಯವಾಗಿದೆ.
ಇತರ ಗ್ಯಾಲರಿಗಳು