ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕ ಹವಾಮಾನ; ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ; ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆಯು ಬುಧವಾರ (ಮೇ 15) ಪ್ರಕಟಿಸಿದ ಮಳೆ ಮುನ್ಸೂಚನೆ ಮುನ್ನೆಚ್ಚರಿಕೆ ಪ್ರಕಾರ, ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ. ಇದರ ಪೂರ್ಣ ವಿವರ ಇಲ್ಲಿದೆ.
CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಪ್ರಸ್ತುತ ಕೇರಳ ತೀರದಿಂದ ಮರಾಠವಾಡದ ಕಡೆಗೆ ಚಲಿಸುತ್ತಿದ್ದು, ಇದರ ಪರಿಣಾಮ ಮುಂದಿನ ಒಂದು ವಾರದವರೆಗೆ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅಂದರೆ, ಕರ್ನಾಟಕ ಹವಾಮಾನ ವರದಿಯಂತೆ ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 
icon

(1 / 6)

ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಂದರ್ಭ ಕೆಲವೆಡೆ ವ್ಯಾಪಕವಾಗಿ ಗುಡುಗು, ಸಿಡಿಲು ಮತ್ತು ಬಿರುಗಾಳಿ(40-50 kmph) ಸಹಿತ, ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಿಗೆ Yellow Alert ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
icon

(2 / 6)

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೇ 15 ರಿಂದ 18ರ ವರೆಗೆ ಗುಡುಗು, ಸಿಡಿಲಿ ಮತ್ತು ಬಿರುಗಾಳಿ (40-50 kmph) ಕೂಡಿದ ಅಧಿಕ ಮಳೆಯಾಗುವ ಸಾಧ್ಯತೆಯಿರುತ್ತದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ. 
icon

(3 / 6)

ಮೇ 22 ರ ತನಕವೂ ಕರ್ನಾಟಕದಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಮಳೆ ಬೀಳುವ ಸಾಧ್ಯತೆ ಇದೆ. ಮೂರು ದಿನಗಳ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಮತ್ತು ಪ್ರಮಾಣ ಕಡಿಮೆಯಾಗಲಿದೆ ಎಂದು ವರದಿ ಹೇಳಿದೆ.
icon

(4 / 6)

ಆದಾಗ್ಯೂ ಗುಡುಗು ಮಿಂಚು ಮತ್ತು ಬಿರುಗಾಳಿಯ ತೀವ್ರತೆಯೊಂದಿಗೆ ಕೆಲವು ಕಡೆಗೆ ತೀವ್ರ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಅಂತಹ ಜಿಲ್ಲೆಗಳಲ್ಲಿ ಆಯಾ ದಿನಗಳಂದು ಯೆಲ್ಲೋ ಅಲರ್ಟ್ ಅನ್ನು ಮಳೆ ಮುನ್ಸೂಚನೆ ವರದಿ ಪ್ರಕಟಿಸಿದೆ.
icon

(5 / 6)

ಈ ನಡುವೆ ಮುಂಗಾರು ಮಳೆ ವಾಡಿಕೆಯಂತೆ ಮೇ 31ಕ್ಕೆ ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
icon

(6 / 6)

ಈ ನಡುವೆ ಮುಂಗಾರು ಮಳೆ ವಾಡಿಕೆಯಂತೆ ಮೇ 31ಕ್ಕೆ ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IPL_Entry_Point

ಇತರ ಗ್ಯಾಲರಿಗಳು