Karnataka Weather: ಬಿಪರ್‌ಜಾಯ್ ಚಂಡಮಾರುತದಿಂದಾಗಿ ಮಳೆ; ಇನ್ನೆರಡು ದಿನದೊಳಗೆ ರಾಜ್ಯಕ್ಕೆ ಮುಂಗಾರು ಆಗಮನ
- Cyclone Biparjoy: ಬಿಪರ್‌ಜಾಯ್ ಚಂಡಮಾರುತದಿಂದಾಗಿ ಕರ್ನಾಟಕ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜನರು ಇದನ್ನೇ ಮುಂಗಾರು ಮಳೆ ಎಂದುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನ ಎಂಬ ಪೋಸ್ಟರ್ಗಳು ಹರಿದಾಡುತ್ತಿವೆ. ಹಾಗಾದ್ರೆ ರಾಜ್ಯಕ್ಕೆ ಮುಂಗಾರು ಆಗಮನ ಎಂದು?

(1 / 5)
ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಆದರೆ ಬಿಪರ್‌ಜಾಯ್ ಚಂಡಮಾರುತದಿಂದಾಗಿ ಮಳೆಯಾಗುತ್ತಿದೆಯೇ ಹೊರತು ಇದು ಮುಂಗಾರು ಮಳೆ ಅಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನ ಎಂಬ ಪೋಸ್ಟರ್ಗಳು ಹರಿದಾಡುತ್ತಿವೆ.
(2 / 5)
ಆದರೆ, ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನ ಎಂದು ಭಾರತೀಯ ಹವಾಮಾನ ಇಲಾಖೆ (IMD) ಯಾವುದೇ ಮಾಹಿತಿ ನೀಡಿಲ್ಲ. ಬದಲಾಗಿ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಬರಲಿದೆ ಎಂದು ಬೆಂಗಳೂರಿನ ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
(3 / 5)
ಸೈಕ್ಲೋನ್ ಪರಿಣಾಮವಾಗಿ ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಐದು ದಿನಗಳ ವರೆಗೂ ಮಳೆ ಮುಂದುವರೆಯಲಿದೆ. ಕೆಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ.
(4 / 5)
ನೈಋತ್ಯ ಮುಂಗಾರು (Southwest Monsoon) ಮೊನ್ನೆ (ಜೂನ್ 8, ಗುರುವಾರ) ಸಾಮಾನ್ಯಕ್ಕಿಂತ ಒಂದು ವಾರ ತಡವಾಗಿ ಕೇರಳ (Kerala) ಪ್ರವೇಶಿಸಿದೆ. ಈ ಮೂಲಕ ದೇಶದಲ್ಲಿ ಮುಂಗಾರು ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿದೆ. ಕಳೆದ ವರ್ಷ ಮೇ 29ಕ್ಕೆ ಮುಂಗಾರು ಆಗಮನವಾಗಿತ್ತು. 2021ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019ರಲ್ಲಿ ಜೂನ್ 8 ಹಾಗೂ 2018ರಲ್ಲಿ ಮೇ 29ಕ್ಕೆ ದಕ್ಷಿಣ ರಾಜ್ಯವಾದ ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು.
ಇತರ ಗ್ಯಾಲರಿಗಳು