ಕರ್ನಾಟಕದಲ್ಲಿ ಅರಣ್ಯ ಅಪರಾಧ ನಿಗ್ರಹಕ್ಕೆ ಬರಲಿದೆ ಗರುಡಾಕ್ಷಿ; ಆನ್‌ಲೈನ್ ಎಫ್ಐಆರ್ ಪದ್ದತಿ ಜಾರಿ
- ಕರ್ನಾಟಕ ಅರಣ್ಯ ಇಲಾಖೆಯ ಅಪರಾಧ ದಾಖಲೀಕರಣವೂ ಇನ್ನೂ ಹೈಟೆಕ್ ಆಗಲಿದೆ. ಇದಕ್ಕಾಗಿ ಗರುಡಾಕ್ಷಿ ಎನ್ನುವ ಆನ್‌ಲೈನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರ ವಿವರ ಇಲ್ಲಿದೆ.
- ಕರ್ನಾಟಕ ಅರಣ್ಯ ಇಲಾಖೆಯ ಅಪರಾಧ ದಾಖಲೀಕರಣವೂ ಇನ್ನೂ ಹೈಟೆಕ್ ಆಗಲಿದೆ. ಇದಕ್ಕಾಗಿ ಗರುಡಾಕ್ಷಿ ಎನ್ನುವ ಆನ್‌ಲೈನ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರ ವಿವರ ಇಲ್ಲಿದೆ.
(1 / 7)
ಕರ್ನಾಟಕದಲ್ಲಿ ವನ್ಯಜೀವಿಗಳ ಸಂರಕ್ಷಣೆ ಚಟುವಟಿಕೆ ಹೆಚ್ಚಿದಂತೆ ವನ್ಯಜೀವಿ ಸಂಬಂಧಿತ ಅಪರಾಧ ಪ್ರಕರಣಗಳೂ ದಾಖಲಾಗುತ್ತಲೇ ಇವೆ.ಕರ್ನಾಟಕ ಅರಣ್ಯ ಇಲಾಖೆಯು ಇದಕ್ಕಾಗಿ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ.
(2 / 7)
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಅಪರಾಧ ನಿಗ್ರಹಿಸಲು ಹಲವಾರು ಸುಧಾರಣಾ ಕ್ರಮಕೈಗೊಂಡಿದ್ದು,, ತಂತ್ರಜ್ಞಾನವನ್ನು ಬಳಕೆ ಮಾಡುವಲ್ಲಿ ಕರ್ನಾಟಕ ಮುಂದೆ ಇದೆ.
(3 / 7)
ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು “ಗರುಡಾಕ್ಷಿ” ಆನ್ ಲೈನ್ ಎಫ್.ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಿದ್ದು, ಜ.7ರಂದು ವಿಧಾನಸೌಧದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಉದ್ಘಾಟಿಲಿದ್ದಾರೆ.
(4 / 7)
ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ.
(5 / 7)
ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲಿ ಸಹ ಪ್ರಥಮ ವರ್ತಮಾನ ವರದಿಯನ್ನು (FIR) ಗಳನ್ನು ಆನ್‌ಲೈನ್ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಈಶ್ವರ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವೈಲ್ಡ್‌ಲೈಫ್ ಟ್ರಸ್ಟ್ ಆಫ್ ಇಂಡಿಯಾ (WTI) ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
(6 / 7)
ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ
ಇತರ ಗ್ಯಾಲರಿಗಳು