ಕೆಕೆಆರ್ ವಿರುದ್ಧ ಬೌಲಿಂಗ್ ಮಾಡಿದ್ರಾ ವಿರಾಟ್ ಕೊಹ್ಲಿ? ಐಪಿಎಲ್ ಪ್ರಸಾರಕರ ಎಡವಟ್ಟು
- ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಮಾಡಿದರೆ? ಐಪಿಎಲ್ ಪ್ರಸಾರಕರು ಮಾಡಿದ ಎಡವಟ್ಟಿನಿಂದ ಹೀಗೊಂದು ಪ್ರಶ್ನೆ ಉದ್ಭವ.
- ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಮಾಡಿದರೆ? ಐಪಿಎಲ್ ಪ್ರಸಾರಕರು ಮಾಡಿದ ಎಡವಟ್ಟಿನಿಂದ ಹೀಗೊಂದು ಪ್ರಶ್ನೆ ಉದ್ಭವ.
(1 / 5)
ಐಪಿಎಲ್ 2025ರ ಮೊದಲ ಎಸೆತವನ್ನು ವಿರಾಟ್ ಕೊಹ್ಲಿ ಎಸೆದರೇ? ಕೊಹ್ಲಿ ಮೊದಲ ಓವರ್ ಎಸೆದಿದ್ದಾರೆ! ಇದು ನಿಮಗೆ ಆಶ್ಚರ್ಯವನ್ನುಂಟು ಮಾಡಿದೆ ಅಲ್ಲವೇ? ವಾಸ್ತವವಾಗಿ, ಐಪಿಎಲ್ ಪ್ರಸಾರಕರು ಮಾಡಿರುವ ಎಡವಟ್ಟು ಇದಾಗಿದೆ. ಕೆಕೆಆರ್ ಮೊದಲು ಬ್ಯಾಟಿಂಗ್ ನಡೆಸುವ ವೇಳೆ ಮೊದಲ ಓವರ್ ಬೌಲಿಂಗ್ ಮಾಡಲು ಬಂದ ಜೋಶ್ ಹೇಜಲ್ವುಡ್ ಬದಲಿಗೆ ಕೊಹ್ಲಿಯ ಹೆಸರನ್ನು ತೋರಿಸುವ ಮೂಲಕ ಎಡವಟ್ಟು ಮಾಡಿದ್ದಾರೆ. ಅದರ ಪೋಟೋಗಳು ವೈರಲ್ ಆಗುತ್ತಿವೆ.
(2 / 5)
ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಶನಿವಾರ ಕೆಕೆಆರ್ ಮತ್ತು ಆರ್ಸಿಬಿ ನಡುವೆ 2025ರ ಉದ್ಘಾಟನಾ ಪಂದ್ಯ ನಡೆಯಿತು. ಟಾಸ್ ಗೆದ್ದ ಆರ್ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲ ಓವರ್ ಬೌಲಿಂಗ್ ಮಾಡಲು ಹೇಜಲ್ವುಡ್ ಬಂದರು. ಆದರೆ ನೇರ ಪ್ರಸಾರದಲ್ಲಿ ತೋರಿಸಿದ್ದು ವಿರಾಟ್ ಕೊಹ್ಲಿ ಹೆಸರು.
(3 / 5)
ಮೊದಲು ಬ್ಯಾಟಿಂಗ್ ಮಾಡಿದ ನೈಟ್ ರೈಡರ್ಸ್ 8 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಅತ್ಯುತ್ತಮ ಪ್ರದರ್ಶನ ನೀಡಿದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ 25 ಎಸೆತಗಳಲ್ಲಿ ತಮ್ಮ ಅರ್ಧ ಶತಕ ಪೂರ್ಣಗೊಳಿಸಿದರು. ನಂತರ 31 ಎಸೆತಗಳಲ್ಲಿ 56 ರನ್ ಗಳಿಸಿ ಔಟಾದರು. ಅಂತಿಮವಾಗಿ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.
(4 / 5)
ಕೆಕೆಆರ್ ನೀಡಿದ 175 ರನ್ಗಳ ಗುರಿ ಬೆನ್ನಟ್ಟಿದ ಬೆಂಗಳೂರು ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅವರ ಆಕ್ರಮಣಕಾರಿ ಆಟದ ನೆರವಿನಿಂದ ಇನ್ನೂ 22 ಎಸೆತಗಳು ಬಾಕಿ ಇರುವಂತೆಯೇ ಗೆದ್ದು ಬಿಗಿತು. ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಗಳಿಸಿ ಔಟಾದರು, ಆದರೆ ವಿರಾಟ್ ತಂಡವನ್ನು ಮುನ್ನಡೆಸಿದರು. ಕೊಹ್ಲಿ ಕೂಡ ಅರ್ಧಶತಕ ಬಾರಿಸಿದರು. 36 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಿತ ಅಜೇಯ 59 ರನ್ ಸಿಡಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಇತರ ಗ್ಯಾಲರಿಗಳು