ಐತಿಹಾಸಿಕ ಮೈಲಿಗಲ್ಲು ತಲುಪಿದ ಕೆಎಲ್ ರಾಹುಲ್; ದಿಗ್ಗಜ ವಿರಾಟ್ ಕೊಹ್ಲಿ ದಾಖಲೆಯೂ ಬ್ರೇಕ್, ಈ ಸಾಧನೆ ಮಾಡಿದ ಮೊದಲ ಭಾರತೀಯ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐತಿಹಾಸಿಕ ಮೈಲಿಗಲ್ಲು ತಲುಪಿದ ಕೆಎಲ್ ರಾಹುಲ್; ದಿಗ್ಗಜ ವಿರಾಟ್ ಕೊಹ್ಲಿ ದಾಖಲೆಯೂ ಬ್ರೇಕ್, ಈ ಸಾಧನೆ ಮಾಡಿದ ಮೊದಲ ಭಾರತೀಯ

ಐತಿಹಾಸಿಕ ಮೈಲಿಗಲ್ಲು ತಲುಪಿದ ಕೆಎಲ್ ರಾಹುಲ್; ದಿಗ್ಗಜ ವಿರಾಟ್ ಕೊಹ್ಲಿ ದಾಖಲೆಯೂ ಬ್ರೇಕ್, ಈ ಸಾಧನೆ ಮಾಡಿದ ಮೊದಲ ಭಾರತೀಯ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಇತಿಹಾಸ ನಿರ್ಮಿಸಿದ್ದಾರೆ. ಅವರು ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ಹಾಗೂ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. ಗುಜರಾತ್‌ ಟೈಟನ್ಸ್‌ ವಿರುದ್ಧದ ಐಪಿಎಲ್‌ ಪಂದ್ಯದ ವೇಳೆ, ವಿರಾಟ್ ಕೊಹ್ಲಿ ಅವರ ದಾಖಲೆಯನ್ನೇ ಮುರಿದ ಕನ್ನಡಿಗ ಆ ದಾಖಲೆ ಏನು ಎಂಬುದನ್ನು ಇಲ್ಲಿ ತಿಳಿಯೋಣ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್, ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲನ್ನು ತಲುಪಿದರು. ಅವರು ಚುಟುಕು ಸ್ವರೂಪದಲ್ಲಿ 8,000 ರನ್‌ಗಳ ಗಡಿ ದಾಟಿದರು.
icon

(1 / 6)

(PTI)

ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 8,000 ರನ್ ಪೂರೈಸಿದ ಭಾರತೀಯ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ. ಆ ಮೂಲಕ ಅವರು ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.
icon

(2 / 6)

(AFP)

ಟಿ20 ಸ್ವರೂಪದಲ್ಲಿ ಕೆಎಲ್ ರಾಹುಲ್ ಕೇವಲ 224 ಇನ್ನಿಂಗ್ಸ್‌ಗಳಲ್ಲಿ 8,000 ರನ್ ಪೂರೈಸಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ 243 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದರು.
icon

(3 / 6)

ಒಟ್ಟಾರೆಯಾಗಿ, ಜಾಗತಿಕವಾಗಿ ವೇಗವಾಗಿ 8,000 ರನ್ ಗಳಿಸಿದವರ ಪಟ್ಟಿಯಲ್ಲಿ ಕೆಎಲ್ ಮೂರನೇ ಸ್ಥಾನದಲ್ಲಿದ್ದರೆ. ಈ ಹಿಂದೆ ಕ್ರಿಸ್ ಗೇಲ್ (213 ಇನ್ನಿಂಗ್ಸ್) ಹಾಗೂ ಬಾಬರ್ ಅಜಮ್ (218 ಇನ್ನಿಂಗ್ಸ್) ಕ್ರಮವಾಗಿ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ.
icon

(4 / 6)

ಕೆಎಲ್ ರಾಹುಲ್ ಟಿ20 ಸ್ವರೂಪದಲ್ಲಿ ತಮ್ಮ ಪ್ರಾಬಲ್ಯ ಮುಂದುವರೆಸಿದ್ದಾರೆ. ಈ ಮಾದರಿಯಲ್ಲಿ ವೇಗವಾಗಿ 5000, 6000, 7000 ಹಾಗೂ 8000 ರನ್ ಗಳಿಸಿದ ಭಾರತೀಯ ಬ್ಯಾಟರ್‌ ಎಂಬ ದಾಖಲೆ ನಿರ್ಮಿಸಿದ್ದಾರೆ. ಸಹಜವಾಗಿ ಕೊಹ್ಲಿ ಸೇರಿದಂತೆ ಬೇರಾವ ಭಾರತೀಯರು ಕೂಡಾ ಇಂಥಾ ದಾಖಲೆ ನಿರ್ಮಿಸಿಲ್ಲ.
icon

(5 / 6)

ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ರಾಹುಲ್‌ ಆಕರ್ಷಕ ಶತಕ ಸಿಡಿಸಿದರು. ಇದು ಐಪಿಎಲ್‌ನಲ್ಲಿ ಅವರ 5ನೇ ಶತಕ. ಕೇವಲ 60 ಎಸೆತಗಳಲ್ಲಿ ಅವರು ಮೂರಂಕಿ ಮೊತ್ತ ತಲುಪಿದರು.
icon

(6 / 6)

ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು