ಮೆಗಾ ಫೈಟ್ನಲ್ಲಿ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್; ಅದೇ ತಂಡ ಕಣಕ್ಕಿಳಿಸಿದ ಬೆಂಗಳೂರು
- Kolkata Knight Riders vs Royal Challengers Bengaluru: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 10ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ.
- Kolkata Knight Riders vs Royal Challengers Bengaluru: ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 10ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಲಿದೆ.
(1 / 7)
ಐಪಿಎಲ್ 2024ರ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಹೈವೋಲ್ಟೇಜ್ ಕದನಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ವೇದಿಕೆ ಕಲ್ಪಿಸುತ್ತಿದೆ. ಮೊದಲು ಬ್ಯಾಟಿಂಗ್ ನಡೆಸುವ ಆರ್‌ಸಿಬಿ ಬೃಹತ್ ಗುರಿ ನೀಡುವ ಲೆಕ್ಕಾಚಾರದಲ್ಲಿದೆ.
(2 / 7)
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಅನುಕುಲ್ ರಾಯ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.(PTI)
(3 / 7)
ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಬೆಂಗಳೂರು 14 ಗೆಲುವು, ಕೋಲ್ಕತ್ತಾ 18 ಕು ಸಾಧಿಸಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೆಗಾ ಫೈಟ್ನಲ್ಲಿ ಗೆಲುವು ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.(PTI)
(4 / 7)
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮೆರಾನ್ ಗ್ರೀನ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.(PTI)
(5 / 7)
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಮಣದೀಪ್ ಸಿಂಗ್, ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್, ಅನುಕುಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ(PTI)
(6 / 7)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್(PTI)
ಇತರ ಗ್ಯಾಲರಿಗಳು