ಕೊಪ್ಪಳ ಜಿಲ್ಲೆ ಹುಲಗಿ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ ವಿಜೃಂಭಣೆ; ಮಳೆಯಲ್ಲಿಯೂ ಭಕ್ತ ಸಾಗರದಿಂದ ಉಧೋ ಉಧೋ ಘೋಷಣೆ
ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪದ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾ ರಥೋತ್ಸವವು ಬುಧವಾರ ಅಪಾರ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು. ಇದರ ಚಿತ್ರನೋಟ ಇಲ್ಲಿದೆ.
(1 / 6)
ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 24ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾತ್ರೆಯ ಮುಖ್ಯ ಭಾಗವಾದ ಮಹಾರಥೋತ್ಸವವು ಬುಧವಾರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ಜರುಗಿತು
(2 / 6)
ಮಳೆಯ ನಡುವೆಯೂ ಮಹಾರಥೋತ್ಸವಕ್ಕೆ ಭಕ್ತರು ಸಾಗರದಂತೆ ಹರಿದು ಬಂದಿರುವುದು ವಿಶೇಷವಾಗಿತ್ತು. ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು
(3 / 6)
ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂದ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸೇರಿದಂತೆ ಲಕ್ಷಾಂತರ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು. ರಥವು ಪಾಜಕಟ್ಟಿ ವರೆಗೆ ಹೋಗಿ ದೇವಸ್ಥಾನ ಬಳಿ ಮರಳುತ್ತಿದ್ದಂತೆ ಎಲ್ಲರೂ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು
(4 / 6)
ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ, ಸ್ನಾನ ಗೃಹ, ಸಾರಿಗೆ ಮತ್ತು ವಾಹನಗಳ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದೆ
(5 / 6)
ರಥೋತ್ಸವ ಅಂಗವಾಗಿ ಹುಲಗಿ ಗ್ರಾಮದಲ್ಲಿ ನಡೆದ ಮೆರವಣಿಗೆಯಲ್ಲಿ ದೇವಿ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ಇತರ ಗ್ಯಾಲರಿಗಳು