ಕನ್ನಡ ಸುದ್ದಿ  /  Photo Gallery  /  Kushtagi News Photos Of Koppal Road Accident Between Indica Car And Lorry Six People Death Mgb

Koppal Road Accident: 6 ಜನರ ಬಲಿ ಪಡೆದ ಕೊಪ್ಪಳ ಭೀಕರ ರಸ್ತೆ ಅಪಘಾತದ ಫೋಟೋಸ್​ ನೋಡಿ

  • Koppal Road Accident: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಇಂದು (ಮೇ 28, ಭಾನುವಾರ) ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಬಿಟ್ಟಿದ್ದಾರೆ. ಫೋಟೋ ಸಹಿತ ವಿವರ ಇಲ್ಲಿದೆ. 

 ಲಾರಿಗೆ ಇಂಡಿಕಾ‌ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.  
icon

(1 / 5)

ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರಿನ ಟೈರ್ ಸ್ಪೋಟಗೊಂಡಿದ್ದು, ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. 
icon

(2 / 5)

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು.
icon

(3 / 5)

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯಶೋಧಾ ವಂಟಿಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
icon

(4 / 5)

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಹೊರಗಡೆ ತೆಗೆಯಲು ಹರಸಾಹಸ ಪಟ್ಟಿದ್ದಾರೆ. 
icon

(5 / 5)

ಇತರ ಗ್ಯಾಲರಿಗಳು